ಉದ್ಭವ ಠಾಕ್ರೆಯ ಉದ್ಧಟತನ

0
485

ಬೆಳಗಾವಿ, 24- ಬೆಳಗಾವಿಯು ಮಹಾರಾಷ್ಟ್ರದ ಅವಿಭಾಜ್ಯ ಅಂಗ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಅಲ್ಲ. ಅದು ಕರ್ನಾಟಕ ಆಕ್ರಮಿತ ಪ್ರದೇಶ. ಕರ್ನಾಟಕ ಆಕ್ರಮಿತ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಪಡೆಯುವ ಹೋರಾಟ ಮುಂದುವರೆಯಲಿದೆ ಎಂದು ಮಹಾರಾಷ್ಟ್ರದ ಶಿವಸೇನೆಯ ಮುಖ್ಯಸ್ಥ ಉದ್ಭವ ಠಾಕ್ರೆ ಉದ್ದಟತನದ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಗಡಿ ಗ್ರಾಮ ಶಿನ್ನೋಳಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಪಡೆದೆ ತೀರುತ್ತೇವೆ ಎಂದು ವಚನ ನೀಡುತ್ತೇನೆ. ಗಡಿ ಭಾಗದ ಮರಾಠಿಗರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. ಶಿವಸೇನೆಯ ಸಂಸದರು, ಸಚಿವರು, ಶಾಸಕರು ಮತ್ತು ಕಾರ್ಯಕರ್ತರು ನಿಮ್ಮ ಪರವಾಗಿ ಹೋರಾಡುತ್ತಾರೆ ಎಂದು ಹೇಳಿಕೊಂಡಿದ್ದಾರೆ.
ಬೆಳಗಾವಿ ಸೇರಿದಂತೆ ಗಡಿ ಭಾಗದಲ್ಲಿ ಕರ್ನಾಟಕ ಸರಕಾರ ದಬ್ಬಾಳಿಕೆ ನಡೆಸುತ್ತಿದೆ. ಮರಾಠಿಗರ ಯಾವೊಂದು ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಕರ್ನಾಟಕದ ದಬ್ಬಾಳಿಕೆ ಬೇಗನೆ ಅಂತ್ಯವಾಗುತ್ತದೆ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುತ್ತದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here