ಶೀಘ್ರ ಉಚಿತ ವಸತಿ ನಿಲಯ

0
29

ದಾವಣಗೆರೆ,.5- ಅಖಿಲ ಭಾರತ ವೀರಶೈವ ಮಹಾಸಭಾದಿಂದ ಶೀಘ್ರದಲ್ಲೇ ಉಚಿತ ವಸತಿ ನಿಲಯವನ್ನು ಪ್ರಾರಂಭಿಸುವ ಮೂಲಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಅಖಿಲ ಭಾರತ ವೀರಶೈವ ಮಹಾಸಭಾದ ಬೆಂಗಳೂರು ನಗರ ಜಿಲ್ಲಾ ಘಟಕದಿಂದ ಭಾನುವಾರ, ಬೆಂಗಳೂರು ವಿಜಯನಗರದ ಜಗಜ್ಯೋತಿ ಸುಜ್ಞಾನ ಮಂಟಪದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಮಹಾಸಭಾದಿಂದ ಪ್ರತಿ ಹಂತದಲ್ಲೂ ಸಹಕಾರ ದೊರೆಯಲಿದೆ. ವಿದ್ಯಾರ್ಥಿಗಳು ಸಹ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನ ಪಡೆದು ಸಮಾಜಕ್ಕೆ ಮಾದರಿ ಕಾರ್ಯ ನಿರ್ವಹಿಸುವ ಮೂಲಕ ಮಹಾಸಭಾಕ್ಕೆ ಕೀರ್ತಿ ತರಬೇಕೆಂದು ಕರೆ ನೀಡಿದರು.

ಬೆಂಗಳೂರಿನ ವಿಭೂತಿಮಠದ ಶ್ರೀ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಮಹಾಸಭಾದ ರಾಜ್ಯಾಧ್ಯಕ್ಷ ತಿಪ್ಪಣ್ಣ, ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ, ಬಿ.ಎಸ್.ಪರಮಶಿವಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here