ಸರಕಾರ ಜನರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಲಿ

0
39

ಧಾರವಾಡ,ಆ.5- ಅತಿವೃಷ್ಠಿ ಮತ್ತು ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಜಿಲ್ಲೆಯ ಜನರ ನೆರವಿಗೆ ಸರಕಾರ ಧಾವಿಸಬೇಕು ಎಂದು ನವನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಕಿತ್ತೂರ ಆಗ್ರಹಿಸಿದ್ದಾರೆ.

ರಾಜ್ಯದ ಐದಾರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಮತ್ತು ನದಿಗಳಲ್ಲಿ ಪ್ರವಾಹ ಉಂಟಾದ ಪರಿಣಾಮ ಜನರು ತೊಂದರೆಯಲ್ಲಿದ್ದಾರೆ. ಆದರೆ, ಈ ಬಗ್ಗೆ ತುರ್ತು ಗಮನಹರಿಸಬೇಕಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅನರ್ಹ ಶಾಸಕರ ಜೊತೆ ಹರಟೆ ಹೊಡೆಯುವ ಕಾರ್ಯದಲ್ಲಿ ತೊಡಗಿದ್ದಾರೆ.

ಹಿಂದಿನ ಸಮ್ಮಿಶ್ರ ಸರಕಾರ ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿತ್ತು. ಆದರೆ, ಅದನ್ನು ಸಹಿಸದ ಬಿಜೆಪಿಗರು ಸಂಚು ರೂಪಿಸಿ ಸರಕಾರವನ್ನು ಉರುಳಿಸಿದರು. ಸರಕಾರ ಉರುಳಿಸುವ ಸಂದರ್ಭದಲ್ಲಿ ಇದ್ದ ಆತುರ ಈಗ ಅಧಿಕಾರ ಸಿಕ್ಕ ಮೇಲೆ ಕಾಣುತ್ತಿಲ್ಲ.

ಕೂಡಲೇ ಮುಖ್ಯಮಂತ್ರಿಗಳು ಅತಿವೃಷ್ಠಿ ಮತ್ತು ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here