ಪ್ಯಾನೆಲ್ ವಕೀಲರು ಪಾರದರ್ಶಕವಾಗಿ ಕೆಲಸ ಮಾಡಲಿ

0
35

ಗದಗ,ಆ.24- ಪ್ಯಾನೆಲ್ ವಕೀಲರು ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿದುಕೊಂಡು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ನ್ಯಾಯ ಒದಗಿಸುವಲ್ಲಿ ಮುಂದಾಗಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್. ಸಂಗ್ರೇಶಿ ಹೇಳಿದರು.

ಸ್ಥಳೀಯ ನಗರಸಭೆಯ ಸಭಾಭವನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಹೊಸದಾಗಿ ನೇಮಕಗೊಂಡ ಪ್ಯಾನಲ್ ವಕೀಲರಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ,  ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಏನಾದರೂ ಸಮಸ್ಯೆಗಳಿದ್ದರೆ  ಕಾರ್ಯಾಗಾರದಲ್ಲಿ  ಪರಿಹರಿಸಿಕೊಳ್ಳಬಹುದು.  ಈ ಕಾರ್ಯಾಗಾರದ ಸದುಪಯೋಗವನ್ನು ಎಲ್ಲ ಪ್ಯಾನಲ್ ವಕೀಲರು ಪಡೆದುಕೊಳ್ಳಬೇಕೆಂದು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್.ಸಂಗ್ರೇಶಿ ಅವರು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ಅವರು ಮಾತನಾಡಿ, ರೈತರು ಹಾಗೂ ಮಕ್ಕಳು ಸೇರಿದಂತೆ ಸಾರ್ವಜನಿಕರು ಕಾನೂನು ಕುರಿತು ತಿಳುವಳಿಕೆ ಹೊಂದುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ಈ ಕಾರ್ಯಾಗಾರದಲ್ಲಿ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಆರ್.ಕೆ. ಕಾಗದಗಾರ, ಒಂದನೇಯ ಹೆಚ್ಚುವರಿ ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ  ಪಿ.ಜಿ.ಚಲುವಮೂರ್ತಿ,  ತರಬೇತುದಾರರಾದ ರಮಾದೇವಿ ಹಾಗೂ ಪ್ಯಾನೆಲ್ ವಕೀಲರುಗಳು ಉಪಸ್ಥಿತರಿದ್ದರು.

ಪ್ಯಾನಲ್ ವಕೀಲ ಕೆ.ಎಂ. ಶಲವಡಿ ಪ್ರಾರ್ಥಿಸಿದರು. ಜಿಲ್ಲಾ ವಕೀಲರ ಸಂಘದ ಜಂಟಿ ಕಾರ್ಯದರ್ಶಿ ವೈ.ಡಿ.ತಳವಾರ ವಂದಿಸಿದರು.   ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಶಿರಸ್ತೇದಾರ ಬಿ.ಎಂ. ಕುಕನೂರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here