ಬಾಲ್ಯವಿವಾಹದಿಂದ ಹಲವಾರು ಸಮಸ್ಯೆ ಉದ್ಭವ

0
37

ಗದಗ,ಆ.24- ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಬಾಲ್ಯವಿವಾಹ ಮಾಡುವುದರಿಂದ ಅವರು ಸಾಮಾಜಿಕ, ಮಾನಸಿಕ, ದೈಹಿಕ, ತೊಂದರೆಗಳನ್ನು ಅನುಭವಿಸ್ಮುತ್ತಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಹಾಗೂ ಪರಿವೀಕ್ಷಣಾಧಿಕಾರಿ ಪ್ರಕಾಶ ವಾಲಿ ಅವರು ಹೇಳಿದರು.

ಸ್ಥಳೀಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕೆ.ಕೆ.ಎಸ್.ಎಸ್ ಬಿ.ಎಸ್.ಡಬ್ಲ್ಯೂ, ಎಂ.ಎಸ್. ಡಬ್ಲ್ಯೂ ವಿದ್ಯಾರ್ಥಿಗಳು ಕ್ಷೇತ್ರಕಾರ್ಯಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆ 2006 ತಿದ್ದುಪಡೆ ಕಾಯ್ದೆ-2016ರನ್ವಯ ಒಂದು ಲಕ್ಷದವರೆಗೆ ದಂಡ ಹಾಗೂ ಕನಿಷ್ಠ 1 ವರ್ಷದಿಂದ 2 ವರ್ಷಗಳವರೆಗೆ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ಇರುತ್ತದೆ ಎಂದು ಹೇಳಿದ ಅವರು ನಿಮ್ಮ ಸಹಪಾಠಿಗಳು, ಸ್ನೇಹಿತರು, ನಿಮ್ಮ ಮನೆಯಲ್ಲಿ ಅಥವಾ ಮನೆಯ ಅಕ್ಕ-ಪಕ್ಕದಲ್ಲಿ ಬಾಲ್ಯವಿವಾಹ ನಡೆಯುವುದು ತಮ್ಮ ಗಮನಕ್ಕೆ ಬಂದರೆ ಕೂಡಲೇ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡುವುದರ ಮೂಲಕ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಸಾಮಾಜಿಕ ಪ್ರಜ್ಞೆ ಮೂಡಿಸಬೇಕೆಂದು ಹೇಳಿದರು.

ರಮೇಶ ಕಳ್ಳಿಮನಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ಹಿಂಸೆ, ಲೈಂಗಿಕ ಶೋಷಣೆ ನಡೆಯುತ್ತಿದ್ದು ಇವುಗಳ ಪ್ರಮಾಣ ಕಡಿಮೆ ಮಾಡಲು ಸರ್ಕಾರ ಪೋಕ್ಸೋ ಕಾಯ್ದೆ-2012 ರಲ್ಲಿ ಜಾರಿಗೆ ತರಲಾಗಿದೆ. ಇದು ಮಕ್ಕಳ ರಕ್ಷಣೆಯ ಸಲುವಾಗಿ ಇರುವಂತಹ ಕಟ್ಟು-ನಿಟ್ಟಾದ ಕಾಯ್ದೆಯಾಗಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಕೆ.ಕೆ.ಎಸ್.ಎಸ್ ಕಾಲೇಜಿನ ಗುರುಗಳಾದ ಪ್ರಕಾಶ ಗಾಣಿಗೇರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪುಷ್ಪಾ ಬಂಡಿವಡ್ಡರ ಸ್ವಾಗತಿಸಿದರು.

LEAVE A REPLY

Please enter your comment!
Please enter your name here