ಲಾರಿ-ಬೈಕ್ ಅಪಘಾತ : ನೌಸೇನಾ ಅಧಿಕಾರಿಗೆ ಗಾಯ

0
39

ಕಾರವಾರ,ಆ.24- ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್‍ನಲ್ಲಿ ಸಂಚರಿಸುತ್ತಿದ್ದ ನೌಕಾಸೇನಾ ಅಧಿಕಾರಿಯೊಬ್ಬರ ಕಾಲಿಗೆ ಗಂಭೀರ ಗಾಯವಾದ ಘಟನೆ ನಗರದ ಬೈತಖೋಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿದ್ದು ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಲ್ಲಿನ ಐಎನ್‍ಎಸ್ ಕದಂಬ ನೌಕಾನೆಲೆಯ ಲೆಫ್ಟಿನೆಂಟ್ ಕಮಾಂಡರ್ ಅಶುತೋಷ ಶುಕ್ಲಾ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ. ಬೈಕ್ ಸವಾರ ಕಾರವಾರದಿಂದ ಅರಗಾ ನೌಕಾನೆಲೆಯತ್ತ ಸಂಚರಿಸುತ್ತಿದ್ದರು. ಈ ವೇಳೆ ಲಾರಿ ಅಂಕೋಲಾದಿಂದ ಕಾರವಾರದತ್ತ ವೇಗವಾಗಿ ಬಂದು ಬೈಕ್‍ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನೌಕಾಸೇನಾ ಅಧಿಕಾರಿಯ ಬಲಗಾಲಿಗೆ ಗಂಭೀರ ಗಾಯವಾಗಿದ್ದು ತಕ್ಷಣ ಅವರನ್ನು ಐಎನ್‍ಎಸ್ ಪತಂಜಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here