ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

0
39

ಧಾರವಾಡ,ಆ.24- ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕೃಷಿನಗರ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ಶುಕ್ರವಾರದಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಮಕ್ಕಳೊಂದುಗೆ ಜನ್ಮಾಷ್ಟಮಿಯನ್ನು ಅತ್ಯಂತ ವಿಜೃಂಬಣೆಯಿಂದ ಆಚರಿಸಲಾಯಿತು.

ಶಾಲೆಯ ಚಿಕ್ಕ ಚಿಕ್ಕ ಮಕ್ಕಳು ಕೃಷ್ಣ ಮತ್ತು ರಾಧೆಯ ವೇಷ ಭೂಷಣಗಳಲ್ಲಿ ಬಂದು ಶಾಲೆಯಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿದರು. ಎಲ್ಲ ಮಕ್ಕಳು ನೆರೆ ಸಂತ್ರಸ್ಥರಿಗೆ ದೇವರು ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥಿಸಿದರು.. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಡಾ. ಎಮ್. ಬಿ. ಚೆಟ್ಟಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲ ಮಕ್ಕಳಿಗೆ ಹಾಲು, ಹಣ್ಣು, ಸಿಹಿ ತಿನಿಸು, ಪುಸ್ತಕ, ಪೆನ್‍ಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಇಂದಿರಾ ಅಲ್ಲದೇ ಶ್ರೀಮತಿ ಅಭಿನೇತ್ರಿ ಚೆಟ್ಟಿ, ಶ್ರೀಮತಿ ಲಾವಣ್ಯ ಮತ್ತು ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳಾದ ಶಿವಪುತ್ರಪ್ಪ ಹೊನ್ನಳ್ಳಿ, ಡಾ. ಶ್ರೀನಿವಾಸÀ ದೇಸಾಯಿ, ಚವ್ಹಾಣ ಹಾಗೂ ಪ್ರಾಧ್ಯಾಪಕರು ಮತ್ತು ಪ್ರಾಧ್ಯಾಪಕಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here