ಹವೆರಿ

ಪಶುಭಾಗ್ಯ ಯೋಜನೆ ಅರ್ಜಿ ಆಹ್ವಾನ

ಹಾವೇರಿ: ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ವತಿಯಿಂದ 2017-18ನೇ ಸಾಲಿನಲ್ಲಿ ಪಶು ಭಾಗ್ಯ ಯೋಜನೆಯಡಿ ಮಿಶ್ರತಳಿ ಹಸು, ಎಮ್ಮೆ, ಕುರಿ, ಮೇಕೆ, ಕೋಳಿ ಘಟಕ ಖರೀದಿಸಲು ರಾಷ್ಟ್ರೀಕೃತ ಬ್ಯಾಂಕಿನ ಸಾಲದ ಸಹಾಯದೊಂದಿಗೆ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.50 ರಷ್ಟು ಹಾಗೂ ಸಾಮಾನ್ಯ ವರ್ಗಕ್ಕೆ ಶೇ.25ರಷ್ಟು ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯ ಅನ್ವಯ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಭೂರಹಿತ ಕೃಷಿ ಕಾರ್ಮಿಕರು, ಸಣ್ಣ ರೈತರು, ಅತೀ ಸಣ್ಣ ರೈತರು, ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಪಟ್ಟ ತಾಲೂಕಾ ಸಹಾಯಕ ನಿರ್ದೇಶಕರ ಕಚೇರಿಯಿಂದ ಜುಲೈ 10 ರಿಂದ ಆಗಸ್ಟ್ 9ರವರೆಗೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 9ರೊಳಗಾಗಿ ಸಲ್ಲಿಸಬೇಕು.
ಕಳೆದ ಸಾಲಿನಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದಿದ್ದಲ್ಲಿ ಅಂತವರು ಈ ಸಾಲಿನಲ್ಲಿ ಅರ್ಜಿ ಸಲ್ಲಿಸುವುದು ಅವಶ್ಯಕತೆ ಇರುವುದಿಲ್ಲ. ಅರ್ಜಿ ಸಲ್ಲಿಸಿದ ಬಗ್ಗೆ ಪರಿಶೀಲನೆ ಮಾಡಿಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಾ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರನ್ನು ಭೇಟಿಮಾಡಿ ಅಗತ್ಯ ಮಾಹಿತಿಯನ್ನು ಪಡೆಯಬಹುದು ಎಂದು ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Spread the love
Show More

Leave a Reply

Your email address will not be published. Required fields are marked *

Back to top button
Close
%d bloggers like this: