Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಚಿಲುಮೆ ಸಂಸ್ಥೆಗೆ ಹಣ ನೀಡಿದವರ ಮೇಲೆ ಯಾಕೆ ಸಿಬಿಐ, ಐಟಿ, ಇಡಿ ದಾಳಿ ನಡೆಸಿಲ್ಲ 

siddaramaiah

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ವೋಟರ್ ಐಡಿ ದುರ್ಬಳಕೆ ವಿಚಾರವಾಗಿ ಚಿಲುಮೆ ಸಂಸ್ಥೆಯ ಹಣಕಾಸಿನ ವಹಿವಾಟಿನ ಮೇಲೆ ಈ ಸಂಸ್ಥೆಗೆ ಹಣ ನೀಡಿದವರ ಮೇಲೆ ಯಾಕೆ ಸಿಬಿಐ, ಐಟಿ, ಇಡಿ ದಾಳಿ ನಡೆಸಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಖಾಸಗಿ ಸಂಸ್ಥೆ ಚಿಲುಮೆಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ವಹಿಸಿದ್ದರ ಹಿಂದೆ ಬಿಬಿಎಂಪಿ ಮತ್ತು ಚುನಾವಣಾ ಆಯೋಗದ ಅಧಿಕಾರಿಗಳೂ ಇದ್ದಾರೆ. ಚುನಾವಣಾ ಆಯೋಗಕ್ಕೆ ಈ ಕುರಿತು ಮೊದಲೇ ಮಾಹಿತಿ ಇತ್ತು. ಚುನಾವಣಾ ಆಯೋಗದವರು ಬಿಬಿಎಂಪಿಗೆ ಈ ಕುರಿತು ಪತ್ರಗಳನ್ನೂ ಬರೆದಿದ್ದರು.

ಆದರೂ ಆಯೋಗಕ್ಕೂ ಕೇರ್ ಮಾಡದೇ ಚಿಲುಮೆ ಸಂಸ್ಥೆಯ ಅಕ್ರಮ ಹೆಚ್ಚಾಗುತ್ತಾ ಹೋಗಿದೆ. ಹಾಗಾಗಿ ಚುನಾವಣಾ ಆಯೋಗ ಈ ಅಕ್ರಮಕ್ಕೆ ಮೌನ ಸಮ್ಮತಿ ನೀಡಿದೆಯೇ, ಸುಪ್ರೀಮ ಕೋರ್ಟ​ ಚುನಾವಣಾ ಆಯೋಗದ ಮೇಲೆ ಮಾಡಿರುವ ವಿಮರ್ಶೆಗಳು ಸರಿಯಾಗಿವೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.


A B Dharwadkar
the authorA B Dharwadkar

Leave a Reply