ಬೆಂಗಳೂರು : 11,136 ಪೌರ ಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆ ಹೊರಡಿಸಿದ್ದೇವೆ. ಉಳಿದವರಿಗೆ ಎರಡು ಮತ್ತು ಮೂರನೇ ಹಂತದಲ್ಲಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು ಕಾನ್ಸಿರಾಂ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಬಿ.ಆರ್. ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ 11,136 ಪೌರ ಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆ ಹೊರಡಿಸಿದ್ದೇವೆ. ಉಳಿದವರಿಗೆ ಎರಡು ಮತ್ತು ಮೂರನೇ ಹಂತದಲ್ಲಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.
ಶೀಘ್ರವೇ ರಾಜ್ಯಾದ್ಯಂತ ನಗರ ಪೌರಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು, ಪೌರಕಾರ್ಮಿಕರ ಆಪತ್ತು ನಿಧಿಯನ್ನು 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸಮಿತಿ ರಚಿಸಿ ಅವರ ಶಿಫಾರಸ್ಸು ಅನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.