Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

international News

ಕಾಲ್ತುಳಿತಕ್ಕೆ 151 ಜನರ ಸಾವು 


ಸಿಯೋಲ್ : ಹ್ಯಾಲೋವೀನ್ ಹಬ್ಬದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 151ಜನ ಸಾವನ್ನಪ್ಪಿದ್ದಾರೆ. ಗಾಯಾಳುಗಳ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕೊರಿಯಾದ ಸಿಯೋಲ್ ನಲ್ಲಿ ನಡೆಯುತ್ತಿದ್ದ ಈ ಹಬ್ಬಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಈ ವೇಳೆ ಸ್ಥಳದಲ್ಲಿ ಜನಸಂದಣಿ ಹೆಚ್ಚಾಗಿ ನೂಕುನುಗ್ಗಲು ಆರಂಭವಾಗಿದೆ.

ಪರಿಣಾಮವಾಗಿ ಒಂದಷ್ಟು ಮಂದಿ ಉಸಿರಾಟದ ಸಮಸ್ಯೆ ಎದುರಾಗಿ ಕುಸಿದುಬಿದ್ದಿದ್ದು, ಕಾಲ್ತುಳಿತವೂ ನಡೆಯಿತು. ಲೋವೀನ್ ಹಬ್ಬದಲ್ಲಿ ಹೆಚ್ಚಾದ ಜನಸಂದಣಿಯಿಂದಾಗಿ ಇಟಾವೊನ್ನ ಬೀದಿಗಳಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಪೋಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಘಟನೆಯ ಬಗ್ಗೆ ನಡೆಸುತ್ತಿರುವ ತನಿಖೆ ಮುಂದುವರಿದಿದೆ ಎಂದು ಹೇಳಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರ ಸ್ಥಿತಿ ಗಂಭೀರವಾಗಿದೆ.

ಅಪರಿಚಿತ ಸೆಲೆಬ್ರಿಟಿಯೊಬ್ಬರು ಅಲ್ಲಿಗೆ ಭೇಟಿ ನೀಡಿರುವುದನ್ನು ಕೇಳಿದ ನಂತರ ಹೆಚ್ಚಿನ ಸಂಖ್ಯೆಯ ಜನರು ಇಟಾವಾನ್ ಬಾರ್ಗೆ ಧಾವಿಸಿದ ನಂತರ ಈ ಘಟನೆ ಸಂಭವಿಸಿದೆ ಎಂದು ಕೆಲವು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಗಾಯಾಳುಗಳಿಗೆ ತ್ವರಿತ ಚಿಕಿತ್ಸೆಯನ್ನು ನೀಡಲು ಮತ್ತು ಹಬ್ಬದ ಸ್ಥಳಗಳ ಸುರಕ್ಷತೆಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.


A B Dharwadkar
the authorA B Dharwadkar

Leave a Reply