Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ 2.5 ಲಕ್ಷ ರೂ. ಲಂಚ : ಕಾಂಗ್ರೆಸ್‌ ಕಿಡಿ

bommai

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ದೀಪಾವಳಿ ಉಡುಗೊರೆಯಾಗಿ ರಾಜ್ಯದ ಆಯ್ದ ಪತ್ರಕರ್ತರಿಗೆ ಸಿಹಿ ತಿಂಡಿ ಜೊತೆಗೆ ಹಣವನ್ನು ಇಟ್ಟು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟ್ವಿಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಮುಖ್ಯಮಂತ್ರಿ ಕಚೇರಿ ನೀಡಿದ 2.5 ಲಕ್ಷ ರೂ. ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ.

ಕರ್ನಾಟಕದ ಪತ್ರಕರ್ತರು ಪತ್ರಿಕಾ ಧರ್ಮದ ಪಾವಿತ್ರ್ಯತೆಗೆ ಧಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಮುಖ್ಯಮಂತ್ರಿ ಉತ್ತರಿಸಬೇಕು ಎಂದು ಒತ್ತಾಯಿಸಿದೆ.

ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು.. ಸರ್ಕಾರದ್ದೇ…ಬಿಜೆಪಿ ಪಕ್ಷದ್ದೇ..ಮುಖ್ಯಮಂತ್ರಿಗಳದ್ದೇ..40% ಕಮಿಷನ್ ಆ ಹಣದ ಮೂಲವೇ.. ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ..  ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ.. ಎಂದು ಟ್ವೀಟ್ ಮೂಲಕ ಕರ್ನಾಟಕ ಕಾಂಗ್ರೆಸ್ ಆಗ್ರಹಿಸಿದೆ.

ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40% ಕಮಿಷನ್‌ನಲ್ಲಿ ನೀಡಿದ ಹಣವೇ.. 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ.. ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವು.. ಬಸವರಾಜ ಬೊಮ್ಮಾಯಿ ಅವರೇ, ಆ ಲಂಚದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಒತ್ತಾಯಿಸಿದೆ.


A B Dharwadkar
the authorA B Dharwadkar

Leave a Reply