This is the title of the web page

ವಿಜಯಪುರದಲ್ಲಿ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, 24 ಮಂದಿಗೆ ಗಾಯ

 

ವಿಜಯಪುರ, ೧೬- ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದ ಬಳಿ ನಡೆದಿದೆ.

ಅಪಘಾತದಲ್ಲಿ ಬಸ್‌ನಲ್ಲಿದ್ದ 18 ವರ್ಷದ ವಿಜಯಪುರ ನಿವಾಸಿ ಶಿವಾನಂದ ಬಡಿಗೇರ ಮತ್ತು ತಮಿಳುನಾಡು ಮೂಲಕ ಲಾರಿ ಚಾಲಕ ಬಾಬು ವೆಂಕಟೇಶ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು 24 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

You might also like
Leave a comment