ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡುವ ‘ಗೃಹಲಕ್ಷ್ಮಿ’ ಯೋಜನೆಯನ್ನು ಕಾಂಗ್ರೆಸ್ ಇಂದು ಪ್ರಕಟಿಸಿದೆ.
ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಯೋಜನೆಗೆ ಸಂಬಂಧಿಸಿದ ಭಿತ್ತ ಪತ್ರ ಅನಾವರಣ ಮೂಲಕ ಅಧಿಕೃತವಾಗಿ ಯೋಜನೆಯನ್ನು ಘೋಷಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದರೆ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ ರೂ. 2,000 ನೀಡಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಮಹಿಳೆಯರೇ ನಿಮ್ಮ ಮನೆಯ ಗ್ಯಾಸ್ ಸಿಲಿಂಡರ್ ಖಾಲಿಯಾಗಿದೆ ಎಂಬ ಚಿಂತೆ ಬಿಡಿ. ನಿಮ್ಮ ಮನೆಯ ಸಿಲಿಂಡರ್ ತುಂಬಿಸುವುದು ಇನ್ನು ಮುಂದೆ ಕಾಂಗ್ರೆಸ್ ಹೊಣೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.