Live Stream

November 2022
W T F S S M T
 1
2345678
9101112131415
16171819202122
23242526272829
30  

| Latest Version 8.2.9 |

State News

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ಬಿಡುಗಡೆ


ಹಾವೇರಿ : ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ರಾಜ್ಯ ಸರ್ಕಾರ 20 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ ಕುಮಾರ ಹೇಳಿದ್ದಾರೆ.

ಸುದ್ದಿಗಾರರ ಸಚಿವ ಸುನಿಲ ಕುಮಾರ ಮಾತನಾಡಿ , ಹಾವೇರಿಯಲ್ಲಿ ಅದ್ಧೂರಿಯಾಗಿ ಅರ್ಥಪೂರ್ಣವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸರ್ಕಾರದ ಅನುದಾನಕ್ಕೆ ಯಾವುದೇ ಕೊರತೆಗಳು ಆಗುವುದಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ಅವರು 20 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ ಮತ್ತು ಇದರ ಪೂರ್ವ ತಯಾರಿಯ ಬಗ್ಗೆ ಚರ್ಚಿಸುವಂತೆ, ಇದಕ್ಕೆ ಬೇಕಾದ ಕಾಮಗಾರಿ ತಕ್ಷಣವೇ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ, ಅಚ್ಚುಕಟ್ಟಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಜನವರಿ 6ರಂದು ಅದ್ದೂರಿ ಮೆರವಣಿಗೆ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಐದು ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಬಳಸಿಕೊಂಡು ಅಚ್ಚುಕಟ್ಟಾಗಿ ಸಮ್ಮೇಳನ ನಡೆಸಲಾಗುತ್ತದೆ, ಇದಕ್ಕಾಗಿ ಸರ್ಕಾರ ಬಜೆಟ್ ನಲ್ಲಿ 20 ಕೋಟಿ ಮೀಸಲಿಟ್ಟಿತ್ತು, ಅಂತೆಯೇ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದು ಅವರು ಹೇಳಿದರು.


A B Dharwadkar
the authorA B Dharwadkar

Leave a Reply