ಬೆಂಗಳೂರು : 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಂಕ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ ನಿರ್ದೇಶನ ನೀಡಿದೆ.
ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಂಕ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ ತಿಳಿಸಿದೆ.
ಜುಲೈ 30 ರಂದು ಹೊರಡಿಸಲಾಗಿದ್ದ 2021-22 ರ ಸಿಟಿಟಿ ಫಲಿತಾಂಶವನ್ನು ರದ್ದುಪಡಿಸಿರುವ ಹೈಕೋರ್ಟ, ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಮರು ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳ ಪಿಯುಸಿ ಪರೀಕ್ಷೆಯ ಶೇ. 50 ಅಂಕ ಹಾಗೂ ಸಿಇಟಿಯಲ್ಲಿ ಪಡೆದಿರುವ ಶೇ. 50 ಅಂಕ ಪರಿಗಣಿಸಿ ಹೊಸ ರ್ಯಾಂಕ್ ಪಟ್ಟಿ ಪ್ರಕಟಿಸುವಂತೆ ಆದೇಶಿಸಿದೆ.