ಕಾನಪುರ, ೨-ಉತ್ತರ ಪ್ರದೇಶದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ ಟ್ರಾಲಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಪರಿಣಾಮ 26 ಜನ ಸಾವನ್ನಪ್ಪಿದ ದಾರುಣ ಘಟನೆ ಕಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ನಡೆದಿದೆ.
ಭಕ್ತರನ್ನು ಹೊತ್ತ ಟ್ರ್ಯಾಕ್ಟರ್ ಟ್ರಾಲಿ ಉನ್ನಾವೋದಿಂದ ಹಿಂತಿರುಗುತ್ತಿತ್ತು. ಅಪಘಾತದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಟ್ಟು 26 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ. ಯಾತ್ರಿಕರು ಫತೇಪುರದ ಚಂಡಿಕಾ ದೇವಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
https://twitter.com/NewsJankari/status/1576278505645432832?t=Ydtn1oc7xyHDFQtx9zs5mw&s=19
ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದು, ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.



