ಸುಳ್ಯ: ಇಂದು ಮನುಷ್ಯ ಸೇವಿಸುತ್ತಿರುವ ವಿಷಗಾಳಿ, ಔಷಧಿ ಸಿಂಪಡಿಸಿದ ಆಹಾರ ಸೇವನೆಯಿಂದ ಎಂಥೆಂಥ ವೈದ್ಯಕೀಯ ಸಮಸ್ಯೆಗಳು ಆಗುತ್ತಿದ್ದು ಹೃದಯಾಘಾತದಿಂದ 2ನೇ ತರಗತಿಯಲ್ಲಿ ಓದುವ ಕೇವಲ ಏಳು ವರ್ಷದ ವಿದ್ಯಾರ್ಥಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ.
ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ ಕೆ.ಸಿ.(7) ಮೃತ ಬಾಲಕ.
ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು. ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದು, ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದರು.