This is the title of the web page

ರಾಜ್ಯದ ಶಾಲೆ, ಕಾಲೇಜುಗಳಿಗೆ 3 ದಿನ ರಜೆ

ಬೆಂಗಳೂರು, 08: ಹಿಜಾಬ್ ಗದ್ದಲ ತಾರಕಕ್ಕೆ ಏರಿದ ಕಾರಣ ನಾಳೆ ಬುಧವಾರದಿಂದ ಮೂರು ದಿನಗಳ ಕಾಲ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

“ಶಾಲಾ-ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಆಡಳಿತ ಮಂಡಳಿಗಳು ಮತ್ತು ಕರ್ನಾಟಕದ ಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ನಾನು ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳವರೆಗೆ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲು ನಾನು ಆದೇಶಿಸಿದ್ದೇನೆ. ಸಂಬಂಧಪಟ್ಟವರೆಲ್ಲರೂ ಸಹಕರಿಸಲು ವಿನಂತಿ” ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

You might also like
Leave a comment