This is the title of the web page

೩೧ ವಿದ್ಯಾರ್ಥಿಗಳಿಗೆ ಕೋವಿಡ್; ೨ ಶಾಲೆಗಳಿಗೆ ರಜೆ

ಬೆಂಗಳೂರು, ಜೂನ 14- ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿದ್ದು ಬೆಂಗಳೂರಿನಲ್ಲಿ ಎರಡು ಶಾಲೆಗಳ 31 ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿದೆ.

ದಾಸರಹಳ್ಳಿ ವಲಯದ ಎರಡು ಶಾಲೆಗಳಲ್ಲಿ ಸುಮಾರು 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪೀಣ್ಯ 2ನೇ ಹಂತದಲ್ಲಿರುವ ಖಾಸಗಿ ಶಾಲೆಯಲ್ಲಿ 6ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಮತ್ತು ರಾಜಗೋಪಾಲನಗರದ ಖಾಸಗಿ ಶಾಲೆಯ 4 ಮತ್ತು 5ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.

ವಿದ್ಯಾರ್ಥಿಗಳಿಗೆ ಜೂನ್ 9ರಂದು ಸೋಂಕು ದೃಢಪಟ್ಟಿದ್ದು ಎರಡೂ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಸದ್ಯಕ್ಕೆ ಎಲ್ಲಾ ಮಕ್ಕಳಿಗೂ ಮತ್ತು ಶಾಲಾ ಸಿಬ್ಬಂದಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ. ಸದ್ಯ ಶಾಲೆಗಳನ್ನು ಕಂಟೈನ್ಮೆಂಟ್ ಅಂತಾ ಘೋಷಣೆ ಮಾಡಲಾಗಿದೆ. ಪಾಸಿಟಿವ್ ಆಗಿರುವ ಮಕ್ಕಳು ಎಲ್ಲರೂ ಕೂಡ ಆರಾಮಿದ್ದು ಆತಂಕ ಪಡಬೇಕಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

You might also like
Leave a comment