ಬೆಳಗಾವಿ : ಬೆಂಗಳೂರಿನಲ್ಲಿ 9 ತಿಂಗಳ ಮಗುವಿನಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದ ಘಟನೆ ಬೆನ್ನಲ್ಲೆ ಇದೀಗ ಬೆಳಗಾವಿಗೂ ಕೋವಿಡ್ ಕಾಲಿಟ್ಟಿದೆ.
ಬೆಳಗಾವಿಯಲ್ಲಿ ಗರ್ಭಿಣಿಯೊಬ್ಬರಿಗೆ ಕೋವಿಡ್ ಸೋಂಕು ದೃಢ ಪಟ್ಟಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 25 ವರ್ಷದ ಗರ್ಭಿಣಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
ಗರ್ಭಿಣಿ ಕಳೆದ ತಿಂಗಳು ಮಹಾರಾಷ್ಟ್ರದ ಪುಣೆಗೆ ಹೋಗಿದ್ದರು. ಈಗಾಗಲೇ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚಿದ್ದು 50 ಪ್ರಕರಣಗಳು ಪತ್ತೆಯಾಗಿವೆ. ಮೂವರು ಕೊರೋನಾ ಸೋಂಕಿನಿಂದ ಈಗಾಗಲೇ ಸಾವನ್ನಪ್ಪಿದ್ದಾರೆ.
ಇದೀಗ ಗಡಿ ಜಿಲ್ಲೆ ಬೆಳಗಾವಿಗೂ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಇನ್ನು ಕರ್ನಾಟಕದಲ್ಲಿ ಶುಕ್ರವಾರ ಒಂದೇ ದಿನ 19 ಪ್ರಕರಣಗಳು ಪತ್ತೆಯಾಗಿದ್ದು, 35 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.