ಪಾಟ್ನಾ, ೧೭- ಬಿಹಾರ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಸಾಧನ ಬಳಸಿದ ಆರೋಪದ ಮೇಲೆ 49 ಪರೀಕ್ಷಾರ್ಥಿಗಳನ್ನು ಬಿಹಾರ ಪೊಲೀಸರು ಬಂಧಿಸಿರುವ ಘಟನೆ ಪಾಟ್ನಾ ಮತ್ತು ಗಯಾ ಜಿಲ್ಲೆಗಳಲ್ಲಿ ನಡೆದಿದೆ.
ಗಯಾದಾದ್ಯಂತ 36 ಮತ್ತು ಪಾಟ್ನಾದಲ್ಲಿ 13 ಪರೀಕ್ಷಾರ್ಥಿಗಳು ಬ್ಲೂಟೂತ್ ಸಾಧನಗಳನ್ನು ಬಳಸಿ ಸಿಕ್ಕಿಬಿದ್ದಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯನ್ನು ಪಾಟ್ನಾದ ಅನೇಕ ಕೇಂದ್ರಗಳಲ್ಲಿ ನಡೆಸಲಾಯಿತು.
ಕಡಮ್ಕುವಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಪಿಎನ್ ಆಂಗ್ಲೋ ಸಂಸ್ಕೃತ ಶಾಲೆಯಲ್ಲಿಯೂ ಪರೀಕ್ಷೆಯನ್ನು ಆಯೋಜಿಸಲಾಗಿತ್ತು.
ಈ ಕೇಂದ್ರದಲ್ಲಿ ಬ್ಲೂಟೂತ್ ಮೂಲಕ ನಕಲು ಮಾಡುತ್ತಿದ್ದ 13 ಅಭ್ಯರ್ಥಿಗಳನ್ನು ಬಂಧಿಸಲಾಗಿದ್ದು, ನಕಲು ಮಾಡಿ ಸಿಕ್ಕಿಬಿದ್ದ ಅಭ್ಯರ್ಥಿಗಳಲ್ಲಿ 11 ಯುವಕರು ಮತ್ತು ಇಬ್ಬರು ಹುಡುಗಿಯರು ಇರುವುದು ತಿಳಿದು ಬಂದಿದೆ.