ಹಾವೇರಿ : ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸವಣೂರ ಆಹಾರ ನಿರೀಕ್ಷಕರು 6.80 ಕ್ವಿಂಟಾಲ್ ಪಡಿತರ ಅಕ್ಕಿ ಮತ್ತು ಗೂಡ್ಸ್ ವಾಹನ ವಶಕ್ಕೆ ಪಡೆದಿದ್ದಾರೆ.
ಸವಣೂರ ಆಹಾರ ನಿರೀಕ್ಷಕ ದೇವೆಂದ್ರಗೌಡ ಪಾಟೀಲ ನೇತೃತ್ವದಲ್ಲಿ ಸವಣೂರ ತಹಶೀಲ್ದಾರ ಕಚೇರಿ ಸಿಬ್ಬಂದಿಗಳು ಸವಣೂರು ತಾಲೂಕಿನ ಮಾವೂರ ಗ್ರಾಮದ ಬಳಿ ದಾಳಿ ನಡೆಸಿ ಮಾವೂರಿನಿಂದ ಹಾವೇರಿಗೆ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.
ದಾಳಿ ಸಂದರ್ಭದ ವೇಳೆ ಗೂಡ್ಸ್ ವಾಹನದಲ್ಲಿ 40 ಕೆಜಿ ತೂಕದ 17 ಪ್ಲಾಸ್ಟಿಕ್ ಚೀಲಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 15,776 ರೂ., ಮೌಲ್ಯದ ಪಡಿತರ ವಿತರಣೆ ಅಕ್ಕಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



