Please assign a menu to the primary menu location under menu

State

ಮಳೆ ಪರಿಹಾರ ಹಾನಿಗೆ 600 ಕೋಟಿ ರೂ. ಬಿಡುಗಡೆ


ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಸಾಕಷ್ಟು ಹಾನಿಯಾಗಿದೆ. ಹೀಗಾಗಿ ನೆರೆಹಾನಿ ಪರಿಹಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ತಕ್ಷಣದ ಪರಿಹಾರವಾಗಿ 300 ಕೋಟಿ ರೂ.ಹಾಗೂ ರಾಜ್ಯದ ಉಳಿದ ಭಾಗಕ್ಕೆ 300 ಕೋಟಿ ರೂ. ಬಿಡುಗಡೆಗೆ ಆದೇಶಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಹಾನಿಯನ್ನು ಸರಿಪಡಿಸಲು ಪ್ರವಾಹ ಪೀಡಿತ ಜಿಲ್ಲೆಗಳಿಗೆ ತುರ್ತಾಗಿ 600 ಕೋಟಿ ರೂ. ಘೋಷಿಸಿದ್ದಾರೆ.

ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಆಸ್ತಿ ಹಾನಿಯ ಜೊತೆಗೆ ಬೆಳೆ ಹಾನಿಯಾಗಿದ್ದು, ಪರಿಹಾರ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಆಗಮಿಸುತ್ತಿದೆ ಎಂದು ತಿಳಿಸಿದ್ದಾರೆ.


Samadarshi News

Leave a Reply