Please assign a menu to the primary menu location under menu

National

ಜಮ್ಮು ಕಾಶ್ಮೀರದ 64 ಹಿರಿಯ ಕಾಂಗ್ರೆಸ್ ನಾಯಕರ ರಾಜೀನಾಮೆ


ಹೊಸದಿಲ್ಲಿ : ಗುಲಾಮ ನಬಿ ಆಜಾದ ಅವರನ್ನು ಬೆಂಬಲಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ ಸೇರಿದಂತೆ 64 ಹಿರಿಯ ಕಾಂಗ್ರೆಸ್ ನಾಯಕರು ಮಂಗಳವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಬಿಕ್ಕಟ್ಟು ಉಲ್ಲೇಖಿಸಿ ಅವರು ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಂಟಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಚಂದ್ ಮತ್ತು ಮಾಜಿ ಸಚಿವರಾದ ಅಬ್ದುಲ್ ಮಜೀದ ವಾನಿ, ಮನೋಹರ ಲಾಲ ಶರ್ಮಾ, ಘರು ರಾಮ ಮತ್ತು ಮಾಜಿ ಶಾಸಕ ಬಲವಾನ ಸಿಂಗ್ ಸೇರಿದಂತೆ ಇತರ ಹಿರಿಯರು ಜಮ್ಮುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.

ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಅಳವಡಿಸಿಕೊಳ್ಳಲಾದ ಆಯ್ಕೆ ನೀತಿಯಿಂದಾಗಿ ಕಾಂಗ್ರೆಸ್ ರಾಜ್ಯವನ್ನ ಕಳೆದುಕೊಳ್ಳುತ್ತಿರುವುದು ದುರದೃಷ್ಟಕರ ಎಂದು ನಾಯಕರು ಹೇಳಿದ್ದಾರೆ.


Samadarshi News

Leave a Reply