ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಈಗ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ 75 ಯುನಿಟ್ ಮಾಸಿಕ ವಿದ್ಯುತ್ ಉಚಿತವಾಗಿ ನೀಡುವುದಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತಾದರೂ ಸರ್ಕಾರದಿಂದ ಹೊರಡಿಸಿದ್ದ ಸುತ್ತೋಲೆಯನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂಬುದಾಗಿ ಆದೇಶಿಸಿದ್ದಾರೆ.

