ಬಾಗಲಕೋಟೆ

ಇಂದು ವಿಶ್ವ ಪ್ರವಾಸೋದ್ಯಮ ದಿನ

ಬಾಗಲಕೋಟೆ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ 27 ರಂದು ಬೆಳಿಗ್ಗೆ 10.30 ಗಂಟೆಗೆ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ದಿ ಒಂದು ಸಾಧನೆ ಎಂಬ ಸಂದೇಶದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾಂiÀರ್iಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ ಭವನದಲ್ಲಿರುವ ಜಿ.ಪಂ ಸಭಾಭವನದಲ್ಲಿ ಜರಗುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಅವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಎಚ್.ವಾಯ್.ಮೇಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ, ಜಿ.ಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರ ಗಣ್ಯಮಾನ್ಯರು ಆಗಮಿಸಲಿದ್ದಾರೆ. ವಿಶ್ರಾಂತ ಉಪನ್ಯಾಸಕ ಹಾಗೂ ಇತಿಹಾಸ ತಜ್ಞ ಡಾ.ಶೀಲಾಕಾಂತ ಪತ್ತಾರ ಅತಿಥಿ ಉಪನ್ಯಾಸ ನೀಡಲಿದ್ದಾರೆ.

Spread the love
Show More

Leave a Reply

Your email address will not be published. Required fields are marked *

Back to top button
Close
%d bloggers like this: