ಬಿರಾದರ್ ಭಾರತದ ಹೆಮ್ಮೆ

ಬೆಂಗಳೂರು, ಅ 09 – ಪಾತ್ರ ಯಾವುದಾದರೇನು, ಜೀವ ತುಂಬಿ ನಟಿಸುವುದಷ್ಟೇ ನನ್ನ ಕೆಲಸ ಎನ್ನುವ ವೈಜನಾಥ ಬಿರಾದರ್ ಅತ್ಯುತ್ತಮ ಕಲಾವಿದ. ಭಿಕ್ಷುಕ, ಕುಡುಕ, ಬಡವ ಮೊದಲಾದ ಪಾತ್ರಗಳಿಂದ 350ಕ್ಕೂ ಹಚ್ಚು ಚಿತ್ರಗಳ ಮೂಲಕ ರಸಿಕರನ್ನು ರಂಜಿಸುವ ಈ ನಟ ಅಮಿತಾಬ ಬಚ್ಚನ್ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕಲೆಯನ್ನು ದೇವರೆಂದು ನಂಬಿರುವ ವೈಜನಾಥ ಬಿರಾದರ್ ಅವರು ಗಿರೀಶ ಕಾಸರವಳ್ಳಿ ನಿರ್ದೇಶನದ ಕನಸೆಂಬ ಕುದುರೆಯನೇರಿ ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿದ್ದು, ಅದಕ್ಕಾಗಿ ಸ್ಪೇನ್ನ ಮ್ಯಾಡ್ರಿಡ್ನಲ್ಲಿ ನಡೆದ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಎಂಬ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬಿರಾದರ್ಗೆ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿರುವ ವಿಚಾರ ತಿಳಿದು ಬಾಲಿವುಡ್ ಅಮಿತಾಬ ಬಚ್ಚನ್ ಇತ್ತೀಚೆಗಷ್ಟೆ ಕರೆ ಮಾಡಿ, ಶುಭಾಶಯ ತಿಳಿಸಿದ್ದಾರೆ. ಭಾರತೀಯನಿಗೆ ಈ ಗೌರವ ಸಿಕ್ಕಿರುವುದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.

Leave A Reply

Your email address will not be published.

error: Content is protected !!