ಕೊಟ್ಟಿಗೆ ಹಾರದಲ್ಲಿ ‘ಕಸ್ತೂರಿ ಮಹಲ್’

ಬೆಂಗಳೂರು, ಅ 12- ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರ. ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.

ಅಕ್ಟೋಬರ್ 5ರಿಂದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ‌ಬಿರುಸಿನಿಂದ ಸಾಗಿದೆ.‌ ಸಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನೂ ಅವರೇ ವಹಿಸಿಕೊಂಡಿದ್ದು, ಇದು ಅವರ ನಿರ್ದೇಶನದ 50ನೇ ಚಿತ್ರ.

ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸುತ್ತಿರುವ‌ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ.

ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಅವರ ಸಂಕಲನ ಕಸ್ತೂರಿ ಮಹಲ್ ಚಿತ್ರಕ್ಕಿದೆ.

ಬಹುಭಾಷ ನಟಿ ಸಾನ್ವಿಶ್ರೀವಾಸ್ತವ್ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ

ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್, ಅಕ್ಷರ್ ಮುಂತಾದವರಿದ್ದಾರೆ.

Leave A Reply

Your email address will not be published.

error: Content is protected !!