ಕೊರೊನಾ ಹಿನ್ನೆಲೆ ಜೂನಿಯರ್ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ ರದ್ದು

ನವದೆಹಲಿ, ಅ.13 – ಈ ವರ್ಷ ಬೆಲ್‌ಗ್ರೇಡ್‌ನಲ್ಲಿ ನಡೆಯಬೇಕಿದ್ದ ಜೂನಿಯರ್ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ ಅನ್ನು ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ರದ್ದುಪಡಿಸಲಾಗಿದೆ.

ಚಾಂಪಿಯನ್‌ಶಿಪ್ ನಡೆಸಲು ಪ್ರಸ್ತುತ ಪರಿಸ್ಥಿತಿಗಳು ಅನುಕೂಲಕರವಾಗಿಲ್ಲದ ಕಾರಣ ಜೂನಿಯರ್ ವಿಶ್ವ ಚಾಂಪಿಯನ್‌ಶಿಪ್ ಅನ್ನು ರದ್ದುಗೊಳಿಸಲಾಗುತ್ತಿದೆ ಎಂದು ವಿಶ್ವ ಕುಸ್ತಿ ವಿಶ್ವ ಕುಸ್ತಿ ಸಂಸ್ಥೆ ಸೋಮವಾರ ತನ್ನ ಸಭೆಯಲ್ಲಿ ನಿರ್ಧರಿಸಿದೆ.

ಈ ವರ್ಷ ಬೆಲ್‌ಗ್ರೇಡ್‌ನಲ್ಲಿ ನಡೆಯಲಿರುವ ಸೀನಿಯರ್ ಚಾಂಪಿಯನ್‌ಶಿಪ್‌ಗೆ, ಶೇಕಡಾ 70 ರಷ್ಟು ಪಾಲುದಾರ ರಾಷ್ಟ್ರಗಳು ತಮ್ಮ ಭಾಗವಹಿಸುವಿಕೆಯನ್ನು ದೃಢಪಡಿಸಿದ್ದು, ಈ ಚಾಂಪಿಯನ್‌ಶಿಪ್ ಡಿಸೆಂಬರ್ 12 ರಿಂದ 20 ರವರೆಗೆ ನಡೆಯುವ ಸಾಧ್ಯತೆ ಇದೆ. ಆದರೆ ಟೂರ್ನಿಯ ಭವಿಷ್ಯ ಆಗಿನ ವಾತಾವರಣದ ಮೇಲೆ ಅವಲಂಬಿತವಾಗಿರುತ್ತದೆ. .

ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಎಕ್ಸಿಕ್ಯೂಟಿವ್ ಕಮಿಟಿ ಮತ್ತೆ ನವೆಂಬರ್ 6 ರಂದು ಸಭೆ ಸೇರಲಿದೆ ಮತ್ತು ಪರಿಸ್ಥಿತಿಯನ್ನು ಅವಲೋಕಿಸಿದ ನಂತರ, ಸೀನಿಯರ್ ಚಾಂಪಿಯನ್‌ಶಿಪ್ ನಡೆಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತದೆ.

Leave A Reply

Your email address will not be published.

error: Content is protected !!