ಲಸಿಕಾ ಅಭಿವೃದ್ಧಿ ಪ್ರಯತ್ನಗಳಿಗೆ ಸರ್ಕಾರದ ಸಹಕಾರ : ಪ್ರಧಾನಿ ಮೋದಿ

ನವದೆಹಲಿ, ಅ 15- ಕೊರೊನಾ ವೈರಸ್ ವಿರುದ್ಧ ಲಸಿಕೆ ಅಭಿವೃದ್ದಿಗೆ ಭಾರತೀಯ ಸಂಶೋಧನಾ ಸಂಸ್ಥೆಗಳು ನಡೆಸುತ್ತಿರುವ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಶ್ಲಾಘಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ಕುರಿತು ಜಾಗರೂಕತೆವಹಿಸಿ .. ನಿರಂತರ ನಿಗಾ ಮುಂದುವರಿಸಬೇಕು ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳಿಗೆ ಪ್ರಧಾನಿ ಸಲಹೆ ನೀಡಿದರು.

ಕೊರೊನಾ ಲಸಿಕೆ ಅಭಿವೃದ್ಧಿಯ ಸಂಶೋಧನೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವಾಲಯದೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು.ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ನೀತಿ ಆಯೋಗ (ಆರೋಗ್ಯ) ಸದಸ್ಯ, ಹಿರಿಯ ವಿಜ್ಞಾನಿಗಳು ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮೋದಿ.. ಕೊರೊನಾ ಸೋಂಕಿಗೆ ವೈಜ್ಞಾನಿಕ ಹಾಗೂ ಸಾಂಪ್ರದಾಯಿಕ ಚಿಕಿತ್ಸೆಗಳ ಅಗತ್ಯವನ್ನು ಒತ್ತಿ ಹೇಳಿದರು. ಇಂತಹ ಸಂಕಷ್ಟದ ಸಮಯದಲ್ಲೂ ಹಲವು ಸಮಸ್ಯೆ ಪರಿಹರಿಸುವಲ್ಲಿ ಆಯುಷ್ ಸಚಿವಾಲಯದ ಪ್ರಯತ್ನವನ್ನು ಅವರು ಶ್ಲಾಘಿಸಿದರು. ಕೊರೊನಾ ಬಗ್ಗೆ ಜಾಗರೂಕರಾಗಿರಿ ಹಾಗೂ ನಿರಂತರ ನಿಗಾ ಮುಂದುವರಿಸಬೇಕು ಎಂದು ಮೋದಿ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಸವಾಲನ್ನು ಎದುರಿಸಲು ಭಾರತೀಯ ಲಸಿಕೆ ಕಂಪನಿಗಳು ನಡೆಸುತ್ತಿರುವ ಪ್ರಯತ್ನಗಳನ್ನು ಪ್ರಧಾನಿ ಶ್ಲಾಘಿಸಿದರು. ಅವರ ಪ್ರಯತ್ನಗಳಿಗೆ ಸರ್ಕಾರ ಬೆಂಬಲ, ಸಹಕಾರ ಮುಂದುವರಿಸಲು ಬದ್ಧವಾಗಿದೆ ಎಂದು ಹೇಳಿದರು. ಅದೇ ರೀತಿ ಸಮೀಕ್ಷೆಗಳು, ಪರೀಕ್ಷೆಗಳನ್ನು ಚುರುಕುಗೊಳಿಸುವಂತೆ ಪ್ರಧಾನಿ ಅಧಿಕಾರಿಗಳಿಗೆ ಆದೇಶ ನೀಡಿದರು.
.
ಲಸಿಕೆ ಅಭಿವೃದ್ದಿ ಪಡಿಸಿದರೆ ಕ್ಷೇತ್ರ ಮಟ್ಟದಲ್ಲಿ ಅವುಗಳ ಸರಬರಾಜಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನಹರಿಸುವಂತೆ ಸೂಚಿಸಿದರು. ತ್ವರಿತ, ಅಗ್ಗದ ವೆಚ್ಚದಲ್ಲಿ ಪರೀಕ್ಷಾ ಸೌಲಭ್ಯ ಶೀಘ್ರದಲ್ಲೇ ಲಭ್ಯವಾಗಬೇಕು ಎಂದರು.

Leave A Reply

Your email address will not be published.

error: Content is protected !!