ಕೊಳವೆಬಾವಿಗೆ ಬಿದ್ದಿದ್ದ ರೈತನ ಮೃತದೇಹ ಹೊರಕ್ಕೆ

ಬೆಳಗಾವಿ, ಮೇ 11- ರಾಯಬಾಗ ತಾಲ್ಲೂಕಿನ ಸುಲ್ತಾನಪುರದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ರೈತ ಲಕ್ಕಪ್ಪ ದೊಡಮನಿ ಅವರ ಮೃತದೇಹವನ್ನು ನಿರಂತರ ಕಾರ್ಯಾಚರಣೆ ಮೂಲಕ ಹೊರತೆಗೆಯಲಾಗಿದೆ.

ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸ್ವತಃ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.

ಘಟನೆಯ ಬಗ್ಗೆ ತನಿಖೆ ನಡೆದಿದ್ದು, ಆಕಸ್ಮಿಕವೋ ಅಥವಾ ಆತ್ಮಹತ್ಯೆಯೇ ಎಂಬುದು ತನಿಖೆಯ ಬಳಿಕ ಸ್ಪಷ್ಟವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಎನ್.ಡಿ.ಆರ್.ಎಫ್. ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.

LEAVE A REPLY

Please enter your comment!
Please enter your name here