ಮಾಸ್ಕ್ ಧರಿಸದ ನಾಗರಿಕರಿಗೆ 1.05 ಲಕ್ಷ ದಂಡ

ಬೆಳಗಾವಿ, ಮೇ 13- ಕೋವಿಡ್-೧೯ ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಮಹಾನಗರ ಪಾಲಿಕೆಯು ಇದುವರೆಗೆ ಒಟ್ಟಾರೆ 1,05,190 ರೂಪಾಯಿ ದಂಡ ವಿಧಿಸಿದೆ.

ಲಾಕ್ ಡೌನ್-3 ರ ಸಂದರ್ಭದಲ್ಲಿ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಈ ವೇಳೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲು ಅವಕಾಶ ಕಲ್ಪಿಸಿರುತ್ತಾರೆ.

ಬೆಳಗಾವಿ ಮಹಾನಗರದಲ್ಲಿ ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದ್ದು, ಇಂತಹ ಪ್ರಕರಣಗಳು ಕಂಡುಬಂದಾಗ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ ಕೆ.ಎಚ್. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here