ನವದೆಹಲಿ, ಜ 24 – ಶ್ವಾಸಕೋಶ ಸೋಂಕು, ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ರ್ ಜೆ ಡಿ ಮುಖ್ಯಸ್ಥ,ಲಾಲೂ ಪ್ರಸಾದ ಯಾದವ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ.
ಲಾಲೂ ಅವರನ್ನು ಶುಕ್ರವಾರ ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಏರ್ಲಿಫ್ಟ್ ಮೂಲಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪತ್ನಿ, ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಾಜಿ ಉಪ ಸಿಎಂ ತೇಜಶ್ವಿ ಯಾದವ್, ಸೇರಿದಂತೆ ಹಲವು ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ.
ಲಾಲೂ ಪ್ರಸಾದ ಯಾದವ ಅವರ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿದೆ, ಮೂತ್ರಪಿಂಡ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಶ್ವಾಸಕೋಶದಲ್ಲಿ ನೀರು ಶೇಖರಣೆಯಾಗಿದೆ.
ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಜೈಲಿನಲ್ಲಿದ್ದ ಲಾಲು ಪ್ರಸಾದ್ ಕಳೆದ ಕೆಲವು ತಿಂಗಳುಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಲಾಲೂ ಅವರ ಆರೋಗ್ಯ ಸುಧಾರಣೆಗಾಗಿ ಆರ್ ಜೆ ಡಿ ಮುಖಂಡರು, ಕಾರ್ಯಕರ್ತರು ಪೂಜೆ- ಹೋಮದಲ್ಲಿ ನಿರತವಾಗಿದ್ದಾರೆ.