ನವದೆಹಲಿ, ಜ 26 – ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು , ರೈತರು – ಪೊಲೀಸರು ನಡುವೆ ಘರ್ಷಣೆ ನಡೆದು ಪರಿಸ್ಥಿತಿ ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಹಾರ ನಡೆಸಿದ್ದಾರೆ.
ದೆಹಲಿಯ ಮುಕಾರ್ಬಾ ಚೌಕ್ ನಲ್ಲಿ ಬ್ಯಾರಿಕೇಡ್ ಗಳನ್ನು ಮುರಿಯಲು ಯತ್ನಿಸಿದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ , ಜೊತೆಗೆ ಅಶ್ರುವಾಯು ಪ್ರಯೋಗಿಸಲಾಗಿದೆ.
ಸಿಂಘು ಮತ್ತು ಟಿಕ್ರಿ ಗಡಿಭಾಗದಲ್ಲಿ ಪೊಲೀಸ್ ಬ್ಯಾರಿಕೇಡ್ ಮುರಿದು ಹೋಗಲು ಪ್ರಯತ್ನಿಸಿದವರ ಮೇಲೆ ಪೊಲೀಸರು ಅಶ್ರವಾಯು, ಲಾಠಿ ಪ್ರಹಾರ ಮಾಡಲಾಗಿದೆ
ರಾಜಪಥ್ ನಲ್ಲಿ ಗಣರಾಜ್ಯೋತ್ಸವ ಮುಗಿದ ಬಳಿಕವಷ್ಟೆ ತಮಗೆ ಟ್ರ್ಯಾಕ್ಟರ್ ನಲ್ಲಿ ಹೋಗಲು ಅನುಮತಿ ನೀಡಲಾಗಿದೆ ಎಂದು ಪೊಲೀಸರು ರೈತರ ಮನವೊಲಿಸಲು ಪ್ರಯತ್ನಿಸಿದರೂ ಕೂಡ ಅವರ ಮಾತು ಕೇಳದೆ ಮುನ್ನುಗ್ಗಿದ್ದರಿಂದ ಪೊಲೀಸರು ಅಶ್ರುವಾಯು, ಲಾಠಿ ಚಾರ್ಜ ನಡೆಸಿದ್ದು ಪರಿಸ್ಥಿತಿ ಬಹಳ ಬಿಗುನಿಂದ ಕೂಡಿದೆ.