ರಾಯಬಾಗ, 28- ತಾಲೂಕಿನ ಭಿರಡಿ ಗ್ರಾಮದ ಒಂದೇ ಕುಟುಂಬದ ನಾಲ್ಕು ಜನರು ರಾಯಬಾಗ ಚಲಿಸುವ ರೈಲಿನ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬುಧವಾರ ರಾತ್ರಿ ಈ ಘಟನೆ ನಡೆದಿದೆ. ರಾಯಬಾಗ ತಾಲೂಕಿನ ಭಿರಡಿ ಗ್ರಾಮದ ಕಲ್ಲಪ್ಪ ಬಡಿಗೇರ ಮತ್ತು ಆತನ ಪತ್ನಿ ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾತಪ್ಪ ಅಣ್ಣಪ್ಪ ಸುತಾರ (60),ಮಹಾದೇವಿ ಸಾತಪ್ಪ ಸುತಾರ (50), ಸಂತೋಷ ಸಾತಪ್ಪ ಸುತಾರ (26), ದತ್ತಾತ್ರಯ ಸಾತಪ್ಪ ಸುತಾರ (28) ಆತ್ಮಹತ್ಯೆ ಮಾಡಿಕೊಂಡವರು.
ತಂದೆ ಮಾಡಿದ ಸಾಲ ಹಾಗೂ ಸಾಲಗಾರರ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗೊತ್ತಾಗಿದೆ.
ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಗೆ ತರಲಾಗಿದೆ.