ಹೊಸದೆಹಲಿ, 29- ನವದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು, ನಾಲ್ಕು-ಐದು ವಾಹನಗಳು ಹಾನಿಗೊಳಗಾಗಿವೆ.
ದೆಹಲಿ ಪೋಲೀಸರು ಸ್ಫೋಟವನ್ನು ಖಚಿತಪಡಿಸಿದ್ದು, ಯಾವುದೇ ಸಾವು ನೋವುಗಳು ವರದಿಯಾಗಿಲ್ಲ ಎಂದು ಹೇಳಿದ್ದಾರೆ.
ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿ ಇರುವ ಇಸ್ರೇಲಿ ರಾಯಭಾರ ಕಚೇರಿಯ ಬಳಿಯ ಪಾದಚಾರಿ ಮಾರ್ಗದ ಬಳಿ ಸ್ಪೋಟ ಸಂಭವಿಸಿದೆ. ಸ್ಪೋಟದಲ್ಲಿ ಕೆಲವು ಕಾರುಗಳಿಗೆ ಹಾನಿಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ದೆಹಲಿ ಪೊಲೀಸ್ ವಿಶೇಷ ಸೆಲ್ ತನಿಖೆ ನಡೆಸುತ್ತಿದೆ.