ಹೊಸದೆಹಲಿ, 30- ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ನಿನ್ನೆ ನಡೆದ ಘಟನೆಯ ಸ್ಥಳದ ಬಳಿ ಲಕೋಟೆಯೊಂದು ದೊರೆತಿದ್ದು ಅದರಲ್ಲಿ “ಇದು ಟ್ರಯಲ್ ಅಷ್ಟೇ” ಎಂದು ಬರೆಯಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪೊಲೀಸರ ತಂಡಕ್ಕೆ ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು, ಕೃತ್ಯದ ಹಿಂದೆ ಭಯೋತ್ಪಾದಕರ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಈ ಮೂಲಕ ಭಾರತದಲ್ಲಿ ಮತ್ತಷ್ಟು ಕಡೆಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಇನ್ನು ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಕೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇನ್ನು ಶುಕ್ರವಾರ ಇಸ್ರೇಲ್ ರಾಯಭಾರ ಕಚೇರಿ ಬಳಿ ಕಾರಿನಲ್ಲಿ ಬಂದಿಳಿದ ಇಬ್ಬರು ವ್ಯಕ್ತಿಗಳಿಂದ ಈ ಕೃತ್ಯ ನಡೆದಿರುವ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಾಹಿತಿ ಲಭ್ಯವಾಗಿದೆ.