ನವದೆಹಲಿ, ಜ 30- ಮಹಾತ್ಮಗಾಂಧಿ ಪುಣ್ಯಸ್ಮರಣೆ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಮತ್ತಿತರೆ ಗಣ್ಯರು ರಾಜ ಘಾಟನಲ್ಲಿರುವ ಶಾಂತಿದೂತನ ಸಮಾಧಿಗೆ ಗೌರವ ಶ್ರದ್ದಾಂಜಲಿ ಸಲ್ಲಿಸಿದರು.
ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಹಾಗೂ ರಕ್ಷಣಾ ಸಚಿವ ರಾಜನಾಥ ಸಿಂಗ್ ಸಹ ಸಹ ಗಾಂಧಿ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು.
ಇದಕ್ಕೂ ಮುನ್ನ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬಾಪು ಅವರ ಪುಣ್ಯ ತಿಥಿಯಂದು ನಮ್ಮ ಗೌರವ, ಅವರ ಆದರ್ಶಗಳು ನಿರಂತರವಾಗಿ ಜನರನ್ನು ಉತ್ತೇಜಿಸಲಿ. ಹುತಾತ್ಮರ ದಿನದಂದು ಭಾರತದ ಸ್ವಾತಂತ್ರ್ಯ ಮತ್ತು ಪ್ರತಿಯೊಬ್ಬ ಭಾರತೀಯರ ಯೋಗಕ್ಷೇಮಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡ ಎಲ್ಲ ಮಹಾನ್ ಮಹಿಳೆಯರು ಮತ್ತು ಪುರುಷರ ವೀರರ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ.
ಗಾಂಧಿ ಅವರನ್ನು 1948 ರಂದು ನಾಥೂರಾಮ ಗೋಡ್ಸೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಮಹಾತ್ಮನ ಹತ್ಯೆ ದಿನವನ್ನು ದೇಶಾದ್ಯಂತ ಹುತಾತ್ಮರ ದಿನವಾಗಿ ಆಚರಿಸಲಾಗುತ್ತಿದೆ.