ಹುಬ್ಬಳ್ಳಿ : ಹುಬ್ಬಳ್ಳಿಯ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಎಕ್ಸಕ್ಯೂಟಿವ್ ಇಂಜಿನಿಯರ್ (ಎಇಇ) ದೇವರಾಜ ಶಿಗ್ಗಾವಿ ಅವರ ನಿವಾಸ ಮತ್ತು ಅವರ ತಾಯಿ ಹಾಗೂ ಮಾವನ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಇಂದು ಬೆಳಗ್ಗೆ ಏಕಕಾಲಕ್ಕೆ ದಾಳಿ ಮಾಡಿ, ಆದಾಯಕ್ಕಿಂತ ಹೆಚ್ಚಿನ ಸ್ಥಿರ-ಚಿರಾಸ್ತಿಯ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದಾರೆ.
ಹುಬ್ಬಳ್ಳಿಯ ಅಕ್ಷಯ ಪಾರ್ಕ್ ಬಳಿಯ ರಾಜೀವ ನಗರದಲ್ಲಿರುವ ದೇವರಾಜ ಅವರ ನಿವಾಸ ಹಾಗೂ ಇವರ ತಾಯಿಯ ಗೋಕುಲ ರಸ್ತೆ ಕೋಟಿಲಿಂಗನಗರ ಹಾಗೂ ಇವರ ಮಾವನ ಬೆಂಗೇರಿ ಬಳಿಯ ಬಾಲಾಜಿ ನಗರದ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ, ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ.
ಇಂಜಿನಿಯರ್ ಶಿಗ್ಗಾವಿ ಮನೆಯಲ್ಲಿ ಪತ್ತೆಯಾದ ಅಪಾರ ಪ್ರಮಾಣ ದುಡ್ಡು, ಚಿನ್ನಾಭರಣ ಕಂಡು ಎಸಿಬಿ ಅಧಿಕಾರಿಗಳು ಶಾಕ್ ಆಗಿದ್ದಾರೆ. ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.
ಇವುಗಳ ಜೊತಗೆ 27 ಎಕರೆ ಆಸ್ತಿ ಖರೀದಿ ಮಾಡಿದ ದಾಖಲೆಗಳು ಹಾಗೂ ಅಪಾರ ಪ್ರಮಾಣದ ಚೆಕ್ ಬುಕ್ ಕೂಡಾ ಶಿಗ್ಗಾವಿ ಮನೆಯಲ್ಲಿ ಪತ್ತೆಯಾಗಿದ್ದು, ಇನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.