INDIA COVID-19 Statistics

11,009,784
Confirmed Cases
Updated on 22/02/2021 5:15 PM
148,724
Total active cases
Updated on 22/02/2021 5:15 PM
156,470
Total deaths
Updated on 22/02/2021 5:15 PM
Monday, February 22, 2021

INDIA COVID-19 Statistics

11,009,784
Total confirmed cases
Updated on 22/02/2021 5:15 PM
148,724
Total active cases
Updated on 22/02/2021 5:15 PM
156,470
Total deaths
Updated on 22/02/2021 5:15 PM
10,704,590
Total recovered
Updated on 22/02/2021 5:15 PM
Home State Belagavi ಅಕ್ರಮ ಬಿಪಿಎಲ್ ಕಾರ್ಡ ರದ್ದುಪಡಿಸಲು ಉಮೇಶ ಕತ್ತಿ ಸೂಚನೆ

ಅಕ್ರಮ ಬಿಪಿಎಲ್ ಕಾರ್ಡ ರದ್ದುಪಡಿಸಲು ಉಮೇಶ ಕತ್ತಿ ಸೂಚನೆ

ಬೆಳಗಾವಿ, ಫೆ.6 : ನಿಯಮಾವಳಿ ಮೀರಿ ಅಕ್ರಮವಾಗಿ ಬಿಪಿಎಲ್ ಕಾರ್ಡುಗಳನ್ನು ಪಡೆದಿರುವ ಕುಟುಂಬಗಳನ್ನು ಗುರುತಿಸಿ ಕಾರ್ಡುಗಳನ್ನು ಕಾಲಮಿತಿಯಲ್ಲಿ ರದ್ದುಪಡಿಸಲು ಕೂಡಲೇ ವಿಶೇಷ ಅಭಿಯಾನ ಕೈಗೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಉಮೇಶ ಕತ್ತಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಮಾರ್ಗಸೂಚಿ ಮೀರಿ ಅನೇಕ ಕುಟುಂಬಗಳು ಬಿಪಿಎಲ್ ಕಾರ್ಡುಗಳನ್ನು ಪಡೆದುಕೊಂಡಿದ್ಧಾರೆ. ಕೂಡಲೇ ಇಂತಹ ಕಾರ್ಡುಗಳನ್ನು ರದ್ದುಪಡಿಸಬೇಕು ಎಂದರು.

ಜನಸಂಖ್ಯೆಗಿಂತ ಅಧಿಕ ಕಾರ್ಡ ವಿತರಿಸಿರುವ ಬಗ್ಗೆ ದೂರುಗಳಿವೆ. ಆರೋಗ್ಯ ಭಾಗ್ಯ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಎಲ್ಲರೂ ಬಿಪಿಎಲ್ ಕಾರ್ಡುಗಳನ್ನು ಪಡೆದುಕೊಳ್ಳಲು ಮುಂದಾಗುತ್ತಿದ್ದಾರೆ. ಇದರಿಂದ ಬಿಪಿಎಲ್ ಕಾರ್ಡುಗಳನ್ನು ಪಡೆದುಕೊಳ್ಳಲು ಹಾತೊರೆಯುತ್ತಿದ್ದಾರೆ ಎನ್ನಲಾಗಿದೆ.

ಸೀಮೆ ಎಣ್ಣೆ ವಿತರಣೆ; ಪರಿಶೀಲಿಸಿ ನಿರ್ಧಾರ:

ಸಿಲಿಂಡರ್ ನೀಡುತ್ತಿರುವಾಗ ಸೀಮೆ ಎಣ್ಣೆ ವಿತರಿಸುತ್ತಿರುವುದರ ಔಚಿತ್ಯವೇನು ಎಂದು ಸಚಿವರು ಪ್ರಶ್ನಿಸಿದರು.

ಮುಂಬರುವ ದಿನಗಳಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಿ ಏಪ್ರಿಲ್ ವೇಳೆಗೆ ಸೀಮೆ ಎಣ್ಣೆ ನೀಡುವುದನ್ನು ಮುಂದುವರಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಉಮೇಶ ಕತ್ತಿ ತಿಳಿಸಿದರು.

ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯವನ್ನು ಒದಗಿಸಬೇಕು. ಸ್ಥಳೀಯವಾಗಿ ಗೋದಿ ಮತ್ತು ಅಕ್ಕಿ ಖರೀದಿಸಲು ಕ್ರಮ ಕೈಗೊಳ್ಳುವ ಬಗ್ಗೆ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮನೆ ಮನೆಗೆ ಭೇಟಿ ನೀಡಿ ಜನರಿಗೆ ಜೋಳ, ಅಕ್ಕಿ, ಗೋದಿ ಸೇರಿಂದತೆ ಯಾವ ರೀತಿಯ ಆಹಾರಧಾನ್ಯ ಬೇಕು ಎಂಬುದರ ಬಗ್ಗೆ ಸಮೀಕ್ಷೆ ನಡೆಸಬೇಕು ಎಂದು ಆಹಾರ ಇಲಾಖೆಯ ನಿರೀಕ್ಷಕರಿಗೆ ಸಚಿವರು ಸೂಚನೆ ನೀಡಿದರು.

ಬಿಪಿಎಲ್ ಕಾರ್ಡು ಬಳಕೆ; ಮಾರ್ಗಸೂಚಿ ಅಗತ್ಯ:

ಸರ್ಕಾರಕ್ಕೆ ತಪ್ಪು ಮಾಹಿತಿಯನ್ನು ನೀಡಿ‌ ಬಿಪಿಎಲ್ ಕಾರ್ಡುಗಳನ್ನು ಪಡೆದ ಕುಟುಂಬಗಳನ್ನು ಗುರುತಿಸಿ ಕಾರ್ಡು ಹಿಂಪಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದರು.
ಬಿಪಿಎಲ್ ಕಾರ್ಡುಗಳ ಬಳಕೆಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.
ಸ್ಥಳೀಯ ಜನರ ಆಹಾರ ಪದ್ಧತಿಯನ್ನು ಆಧರಿಸಿ ಆಹಾರಧಾನ್ಯ ವಿತರಿಸಲು ಕ್ರಮ ಕೈಗೊಳ್ಳಬೇಕು ಸಚಿವರಿಗೆ ಸಲಹೆ ನೀಡಿದರು.

ಜಿಲ್ಲೆಯಲ್ಲಿ ಇರುವ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಅನರ್ಹ ಪಡಿತರ ಚೀಟಿ ರದ್ದುಪಡಿಸಲು ನಿರಂತರ ಸಮೀಕ್ಷೆ ಕೈಗೊಂಡಾಗ ರದ್ದು ಪ್ರಕ್ರಿಯೆ ಸರಳವಾಗಲಿದೆ ಎಂದರು.

14.40 ಲಕ್ಷ ಪಡಿತರ ಚೀಟಿಗಳಿವೆ. ಅದರಲ್ಲಿ ಒಟ್ಟಾರೆ 34 ಲಕ್ಷ ಜನರು ಬಿಪಿಎಲ್ ಪಡಿತರ ಚೀಟಿಯ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಸಿ.ಬಿ.ಕೊಡ್ಲಿ ವಿವರಿಸಿದರು.

ಪಡಿತರ ಚೀಟಿಗಾಗಿ ಒಟ್ಟು 45 ಸಾವಿರ ಹೊಸ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 42 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.
ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು ಜಿಲ್ಲೆಯಲ್ಲಿ 1.71 ಲಕ್ಷ ಕ್ವಿಂಟಲ್ ಅಕ್ಕಿಯನ್ನು ವಿತರಿಸಲಾಗುತ್ತಿದೆ.
ಐದಕ್ಕಿಂತ ಹೆಚ್ಚು ಸದಸ್ಯರ ಬಿಪಿಎಲ್ ಕುಟುಂಬವನ್ನು ಅಂತ್ಯೋದಯ ಕಾರ್ಡುದಾರರನ್ನಾಗಿ ಪರಿವರ್ತಿಸಲಾಗಿದೆ.
ಕುಟುಂಬ ವಿಭಜನೆ ಆಗಿರುವುದರಿಂದ ಜನಸಂಖ್ಯೆಗೆ ಹೋಲಿಸಿದರೆ ಅಧಿಕ ಸಂಖ್ಯೆಯ ಕಾರ್ಡುಗಳು ಕಂಡುಬರುತ್ತಿವೆ ಎಂದು ವಿವರಿಸಿದರು.
ಡಿಸೆಂಬರ್ ನಲ್ಲಿ 738 ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸಲಾಗಿದೆ. ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ ಮೂರು ತಿಂಗಳಲ್ಲಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗುವುದು ಎಂದು ತಿಳಿಸಿದರು.

ಬೆಳಗಾವಿ(ಉತ್ತರ) ಮತ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಉಪಸ್ಥಿತರಿದ್ದರು. ಉಪ ವಿಭಾಗಾಧಿಕಾರಿಗಳಾದ ಯುಕೇಶ್ ಕುಮಾರ್, ಅಶೋಕ ತೇಲಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

State

11 ತಿಂಗಳಲ್ಲಿ ಮೊದಲ ಬಾರಿಗೆ ಕೊರೋನಾ ಇಲ್ಲ

ಬೆಳಗಾವಿ: 22- ಕಳೆದ ಮಾರ್ಚ ತಿಂಗಳಲ್ಲಿ ದೇಶಕ್ಕೆ ಒಕ್ಕರಿಸಿದ ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲೆಯನ್ನೂ ಇನ್ನಿಲ್ಲದಂತೆ ಕಾಡಿತ್ತು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ದಿನವೊಂದಕ್ಕೆ ಸರಾಸರಿ 500 ರ ಗಡಿ ದಾಟುತ್ತಿದ್ದ ಸೋಂಕಿತರ...

ವಿವಾಹ ಸಮಾರಂಭಗಳಿಗೆ ಕಾವಲು; ದಂಡ ಬೀಳುತ್ತೆ ಹುಷಾರ್…!!

ಬೆಂಗಳೂರು: ಫೆ 22 - ಕೋವಿಡ್ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಆರೋಗ್ಯ ಇಲಾಖೆ ಇನ್ನುಮುಂದೆ ವಿವಾಹ ಸಮಾರಂಭಗಳಿಗೆ ಮಾರ್ಷಲ್ ಗಳನ್ನು ನಿಗಾವಹಿಸಲು ನೇಮಕ ಮಾಡಲಿದ್ದು ನಿಯಮ ಮೀರಿದರೆ ಸ್ಥಳದಲ್ಲೇ ದಂಡ ಬೀಳಲಿದೆ ಎಂದು...

ಒಡೆಯಿತು ಸಹನೆಯ ಕಟ್ಟೆ; ಯತ್ನಾಳ ಉಚ್ಚಾಟಿಸಲು ಯಡಿಯೂರಪ್ಪ ಆಗ್ರಹ

ಬೆಂಗಳೂರು: 22- ಪಕ್ಷದ ಆದೇಶ ಹಾಗು ಶಿಸ್ತು ಉಲ್ಲಂಘಿಸಿ ತಮ್ಮ ಹಾಗೂ ಕುಟುಂಬದ ವಿರುದ್ದ ಟೀಕೆ ಮಾಡುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಛಾಟಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿ ಈ...

ಮಾದಕ ವಸ್ತು ಮಾರಾಟ: ಮಹಾರಾಷ್ಟ್ರ ವ್ಯಕ್ತಿ ಬಂಧನ

ಬೆಳಗಾವಿ: 22- ಇತ್ತೀಚೆಗೆ ಮಾದಕ ವಸ್ತು ಮತ್ತು ಅಕ್ರಮ ಮದ್ಯ ಮಾರಾಟ ಮಾಡುವವರ ಮೇಲೆ ದಾಳಿ ಮಾಡುತ್ತಿರುವ ಬೆಳಗಾವಿ ಸಿಸಿಬಿ ಪೊಲೀಸರು ಗಾಂಜಾ ಮಾರಾಟ ಮಾಡಲು ಮಹಾರಾಷ್ಟ್ರದಿಂದ ಆಗಮಿಸಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿ ಅವನಿಂದ...

National

ಮುಂಬೈ ಹೋಟೆಲ್ ನಲ್ಲಿ ಸಂಸದ ಮೋಹನ ದೇಲ್ಕರ ಆತ್ಮಹತ್ಯೆ?

ನವದೆಹಲಿ: ಫೆ 22 - ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ ದೇಲ್ಕರ ಮುಂಬೈನ ಹೋಟೆಲ್ ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೋಹನ್...

ಡಾ. ವರವರ ರಾವ್ ಗೆ ಕೊನೆಗೂ ಜಾಮೀನು

ಮಂಬೈ: ಫೆ 22 - ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಯಾಗಿರುವ 81 ವರ್ಷದ ತೆಲುಗು ಕವಿ ಡಾ. ವರವರ ರಾವ್ ಅವರಿಗೆ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು...

ಮಹದಾಯಿ ವಿವಾದ; ಮೇಲುಸ್ತುವಾರಿ ಸಮಿತಿ ರಚನೆಗೆ ಸುಪ್ರೀಮ ಕೋರ್ಟ ಸೂಚನೆ

ನವದೆಹಲಿ: ಫೆ 22- ಮಹದಾಯಿ ನದಿ ನೀರು ಹಂಚಿಕೆಯ ಮೇಲುಸ್ತುವಾರಿಗೆ ಸಮಿತಿ ರಚಿಸಲು ಸುಪ್ರೀಮ ಕೋರ್ಟ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರ ಮಲಪ್ರಭಾದ ನೀರಿನ ಹರಿವನ್ನು ತಿರುಗಿಸುತ್ತಿದೆ ಎಂದು ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ...

ಮುಂಬೈಯಲ್ಲಿ ಇವೇನಾ ಅಚ್ಛೆ ದಿನ್ ಬ್ಯಾನರ್

ಮುಂಬೈ, 22- ದೇಶದಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ ದರಕ್ಕೆ ತಲುಪಿರುವದರಿಂದ ಶಿವಸೇನೆಯ ಯುವ ವಿಭಾಗವಾದ ಯುವಸೇನೆಯು ಸೋಮವಾರ ಮುಂಬೈ ನಗರದ ಹಲವಾರು ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್, ಡಿಸೆಲ್ ದರ ಬರೆದು ಇದೇನಾ...

International

ಧ್ವಂಸಗೊಂಡ ಹಿಂದೂ ದೇವಾಲಯ ಕೂಡಲೇ ನಿರ್ಮಾಣಕ್ಕೆ ಪಾಕ್ ಕೋರ್ಟ ಆದೇಶ

ಇಸ್ಲಾಮಾಬಾದ: 9- ದುಷ್ಕರ್ಮಿಗಳಿಂದ ಧ್ವಂಸಗೊಂಡಿರುವ ಶತಮಾನಗಳ ಇತಿಹಾಸ ಹೊಂದಿದ್ದ ಹಿಂದೂ ದೇವಾಲಯವನ್ನು ಕೂಡಲೇ ಪುನರ್ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಪಾಕಿಸ್ತಾನ ಸುಪ್ರೀಮ ಕೋರ್ಟ ಆದೇಶಿಸಿದೆ. ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಸಮಯದ ಬಗ್ಗೆ...

ಕೋವಿಡ್ ರೋಗಿಗಳಿಗೆ ಕ್ಷಯರೋಗದ ಅಪಾಯವಿದೆ : ರಶಿಯಾ

ಮಾಸ್ಕೊ, ಫೆ 08- ಕೊರೋನಾ ವೈರಸ್ ಸೋಂಕಿಗೆ ಒಳಗಾದ ರೋಗಿಗಳಿಗೆ ಕ್ಷಯರೋಗ ಬರುವ ಸಾಧ್ಯತೆ ಹೆಚ್ಚು ಎಂದು ರಷ್ಯಾದ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. "ಕೋವಿಡ್ -19 ನಿಂದ ಬಳಲಿದ ನಂತರ ಅನೇಕ ರೋಗಿಗಳು ಶ್ವಾಸಕೋಶದಲ್ಲಿ...

ಬಂಗಾರದ ನಾಲಿಗೆಯ “ಮಮ್ಮಿ”

ಕೈರೋ, 3- ಸತ್ತ ನಂತರ ಮತ್ತೊಂದು ಜೀವನವಿದೆ ಎಂದು ನಂಬಿದ್ದ ಪುರಾತನ ಕಾಲದ ಈಜಿಪ್ತ ನಾಗರಿಕರು ಕೆಡಬಾರದೆಂದು ಶವಗಳಿಗೆ ದ್ರಾವಣ ಹಚ್ಚಿಡುತ್ತಿದ್ದರು. ಹಾಗೆಯೇ ಅವರ ಮತ್ತೊಂದು ಜೀವನಕ್ಕೆ ಬೇಕಾಗುತ್ತದೆಯೆಂದು ಸಾಕಷ್ಟು ಚಿನ್ನವನ್ನು ಶವ...

ಆಂಗ್ ಸಾನ್ ಸೂಕಿ ಬಂಧನ, ಮ್ಯಾನ್ಮಾರ್ ನಲ್ಲಿ ತುರ್ತು ಪರಿಸ್ಥಿತಿ

ಮಾಸ್ಕೋ ಫೆಬ್ರವರಿ 1 - ಮ್ಯಾನ್ಮಾರ್‌ನ ರಾಜಕೀಯ ನಾಯಕಿ ಆಂಗ್ ಸಾನ್ ಸೂಕಿ ಹಾಗೂ ಅಧ್ಯಕ್ಷ ವಿನ್ ಮೈಂಟ್ ಅವರನ್ನು ಬಂಧಿಸಲಾಗಿದೆ ಎಂದು ರಾಯಿಟರ್ಸ್ ವರದಿ ಸೋಮವಾರ ಮಾಡಿದೆ. ದೇಶದ ಆಡಳಿತ ಪಕ್ಷದ ಇತರ...

Entertainment

ಇಂದು ಧಾರವಾಡದಲ್ಲಿ ಬೆಳವಡಿ ಮಲ್ಲಮ್ಮ ನಾಟಕ

ಧಾರವಾಡ: 14- ಹುಬ್ಬಳ್ಳಿಯ ಜೀವಿ ಕಲಾ ಬಳಗದ ಅಧ್ಯಕ್ಷರಾದ ಗದಿಗೆಯ್ಯಾ ಹಿರೇಮಠ ಅವರು ರಚಿಸಿ ನಿರ್ದೇಶಿಸಿದ ಐತಿಹಾಸಿಕ " ಸಮರ ಸಿಂಹಿಣಿ ಬೆಳವಡಿ ಮಲ್ಲಮ್ಮ" ನಾಟಕವು ರವಿವಾರ ದಿ ೧೪- ೨ -೨೦೨೧ ರಂದು ಪ್ರದರ್ಶನಗೊಳ್ಳಲಿದೆ. ಬೆಳವಡಿಯ ನೇತಾಜಿ ತರುಣ...

ಮಾರುಕಟ್ಟೆ ಗಿಜಿಗುಡುವಾಗ ಚಿತ್ರಮಂದಿರವೇಕೆ ಖಾಲಿ?

ಬೆಂಗಳೂರು, ಫೆ 03- “ಬಸ್ ಫುಲ್, ಮಾರ್ಕೆಟ್ ಗಿಜಿ ಗಿಜಿ ಆದರೆ ಚಿತ್ರ ಮಂದಿರಗಳೇಕೆ ಭಣಗುಡಬೇಕು” ಎಂದು ನಟ ಧ್ರುವ ಸರ್ಜಾ ಮಾಡಿರುವ ಟ್ವೀಟ್ ಗೆ ಕನ್ನಡ ಚಿತ್ರರಂಗದ ಬಹುತೇಕ ನಟ, ನಿರ್ದೇಶಕರು...

ಜ. 24ರಂದು ವರುಣ ಧವನ್-ನತಾಶಾ ಮದುವೆ

ಮುಂಬೈ, ಜ 15 - ಖ್ಯಾತ ನಿರ್ಮಾಪಕ, ನಿರ್ದೇಶಕ ಡೇವಿಡ್ ಧವನ ಪುತ್ರ ನಟ ವರುಣ ಧವನ್ ಅವರು ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇದೇ...

‘ಲಂಕಾಸುರ’ ಚಿತ್ರಕ್ಕೆ ಚಾಲನೆ

ಬೆಂಗಳೂರು, ಜ 15 - ಸುಗ್ಗಿ ಹಬ್ಬ ಸಂಕ್ರಾಂತಿಯ ಸಂಭ್ರಮದಂದು ವಿನೋದ ಪ್ರಭಾಕರ ಹಾಗೂ ಲೂಸ್ ಮಾದ ಅಭಿನಯದ ‘ಲಂಕಾಸುರ’ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಎ.ಎಂ.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಾವತಿ ಮುನಿಸ್ವಾಮಿ ಅವರು ನಿರ್ಮಿಸುತ್ತಿರುವ...

Sports

ಭಾರತಕ್ಕೆ 317 ರನ್ ಜಯ

ಚೆನ್ನೈ, ಫೆ 16- ಭಾರತದ ಬಲಿಷ್ಠ ಸ್ಪಿನ್ ಕೋಟೆಯನ್ನು ಭೇದಿಸುವಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ವಿಫಲವಾಗಿದ್ದು, ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ ಪಡೆ 1-1 ರಿಂದ ಸಮಬಲ ಸಾಧಿಸಿದೆ. ನಿರೀಕ್ಷೆಯಂತೆ ಮಂಗಳವಾರ ಭಾರತ...

ಗೆಲುವಿನ ಹೊಸ್ತಿಲಲ್ಲಿ ಭಾರತ

ಚೆನ್ನೈ: ಫೆ 15 - ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಅವರ ಶತಕ ಹಾಗೂ ನಾಯಕ ವಿರಾಟ ಕೊಹ್ಲಿ ಅವರ ಅರ್ಧ ಶತಕದ ನೆರವಿನಿಂದ ಭಾರತ ನೀಡಿದ 482 ರನ್ ಗೆಲುವಿನ ಗುರಿ...

ಚೆನ್ನೈ ತಲುಪಿದ ಇಂಗ್ಲೆಂಡ್ ಕ್ರಿಕೆಟ್ ತಂಡ

ನವದೆಹಲಿ, ಜ.24 - ಫೆಬ್ರವರಿ 5 ರಿಂದ ಭಾರತ ವಿರುದ್ಧದ ಟೆಸ್ಟ್ ಸರಣಿಗಾಗಿ ವೇಗದ ಬೌಲರ್ ಜೋಫ್ರಾ ಆರ್ಚರ್, ಆಲ್‌ರೌಂಡರ್ ಬೆನ್ ಸ್ಟೋಕ್ಸ್, ಬ್ಯಾಟ್ಸ್‌ಮನ್ ರೋರಿ ಬರ್ನ್ಸ್ ಮತ್ತು ಜೊನಾಥನ್ ಟ್ರಾಟ್ ಸೇರಿದಂತೆ...

ರಹಾನೆ ಮತ್ತು ಇತರ ಆಟಗಾರರಿಗೆ ಕ್ವಾರಂಟೈನ್ ವಿನಾಯಿತಿ

ನವದೆಹಲಿ, ಜ.21- ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗಾವಸ್ಕರ್ ಟ್ರೋಫಿಯನ್ನು ಗೆದ್ದು ಗುರುವಾರ ಬೆಳಿಗ್ಗೆ ಮುಂಬೈಗೆ ಮರಳಿದ ನಾಯಕ ಅಜಿಂಕ್ಯ ರಹಾನೆ ಮತ್ತು ಇತರ ನಾಲ್ಕು ಭಾರತೀಯ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರ ಕ್ವಾರಂಟೈನ್ ನಿಂದ ವಿನಾಯಿತಿ...