ವಿಜಯಪುರ: ಫೆ.12 – ಜಮೀನಿನಲ್ಲಿ ಆಟವಾಡುತ್ತಿದ್ದ ಇಬ್ಬರೂ ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಚಿಕ್ಕಆಸಂಗಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಆಸಂಗಿ ಗ್ರಾಮದ ಆಕಾಶ ಮಹಾದೇವ ಬೆನ್ನೂರ (4) ಹಾಗೂ ಬೋರಮ್ಮ ಸಂಗಣ್ಣ ಬೆನ್ನೂರು (4) ಮೃತ ಮಕ್ಕಳು.
ಮನೆಯ ಪಕ್ಕದ ಚಿಕ್ಕಪ್ಪನ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಅಲ್ಲೇ ಇದ್ದ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕೊಲ್ಹಾರ ಪಿಎಸ್ಐ ಸಿದ್ದಪ್ಪ ಯಡಹಳ್ಳಿ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುಎನ್ಐ ಪಿಕೆ