INDIA COVID-19 Statistics

11,111,851
Confirmed Cases
Updated on 28/02/2021 5:26 PM
170,287
Total active cases
Updated on 28/02/2021 5:26 PM
157,190
Total deaths
Updated on 28/02/2021 5:26 PM
Sunday, February 28, 2021

INDIA COVID-19 Statistics

11,111,851
Total confirmed cases
Updated on 28/02/2021 5:26 PM
170,287
Total active cases
Updated on 28/02/2021 5:26 PM
157,190
Total deaths
Updated on 28/02/2021 5:26 PM
10,784,374
Total recovered
Updated on 28/02/2021 5:26 PM
Home State Bengaluru ಜುಲೈ 15 ರಿಂದ 2021-22 ಸಾಲಿನ ಶೈಕ್ಷಣಿಕ ವರ್ಷ: ಫೆ 22 ರಿಂದ ಪೂರ್ಣ ಪ್ರಮಾಣದಲ್ಲಿ...

ಜುಲೈ 15 ರಿಂದ 2021-22 ಸಾಲಿನ ಶೈಕ್ಷಣಿಕ ವರ್ಷ: ಫೆ 22 ರಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ

ಬೆಂಗಳೂರು: ಫೆ 16- ಜುಲೈ 15 ರಿಂದ 2021-22 ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಫೆಬ್ರವರಿ 22 ರಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ತೆರೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಪ್ರಮುಖರ ಜತೆ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಪೂರ್ಣ ಪ್ರಮಾಣದ ಶಾಲೆ ತೆರೆಯುವ ಸಂಬಂಧ ಇಂದು ಐದನೇ ಬಾರಿಗೆ ಆರೋಗ್ಯ,ಶಿಕ್ಷಣ ಇಲಾಖೆಗಳ ಜೊತೆ ಸಭೆ ನಡೆಸಿದ್ದೇವೆ. ಜುಲೈ 15 ರಿಂದ 2021-22 ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ ಎಂದರು.

ರಾಜ್ಯದ ಹಲವು ಭಾಗಗಳಲ್ಲಿ ಈ ತಿಂಗಳ 22 ರಿಂದ 6 ರಿಂದ 8ನೇ ತರಗತಿಯವರೆಗೆ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಬೆಂಗಳೂರು ನಗರ ಹಾಗೂ ಕೇರಳ ಗಡಿ ಭಾಗಗಳಲ್ಲಿ 6 ಮತ್ತು 7ನೇ ತರಗತಿಗಳನ್ನು ಆರಂಭಿಸುತ್ತಿಲ್ಲ. 8ನೇ ತರಗತಿಗಳು ಮಾತ್ರ ಪ್ರಾರಂಭವಾಗಲಿವೆ. ಬೆಂಗಳೂರು ಮತ್ತು ಕೇರಳ ಗಡಿ ಭಾಗದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಇರುವ ಕುರಿತು ಅವಲೋಕನ ನಡೆಯುತ್ತಿದ್ದು, ಈ ತಿಂಗಳ 24 ಹಾಗೂ 25ರಂದು ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

1ರಿಂದ 5ನೇ ತರಗತಿಗಳನ್ನು ಆರಂಭಿಸುವ ಬಗ್ಗೆಯೂ ಇದೇ ಸಂದರ್ಭದಲ್ಲಿ ಸೂಕ್ತ ನಿರ್ಧಾರಕ್ಕೆ ಬರಲಾಗುವುದು. ಹಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆಗಳನ್ನು ಆರಂಭಿಸಿದ್ದು, ರಾಜ್ಯದಲ್ಲೂ ಭೌತಿಕ ತರಗತಿಗಳನ್ನು ನಡೆಸಲು ಆದ್ಯತೆ ನೀಡಲಾಗುತ್ತಿದೆ ಎಂದರು.

 

ಉಳಿದಂತೆ ಇದೇ 22ರಿಂದ ರಾಜ್ಯದ ಉಳಿದ ಭಾಗಗಳಲ್ಲಿ 6,7 ಮತ್ತು 8ನೇ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಶಾಲೆಗೆ ವಿದ್ಯಾರ್ಥಿಗಳು ಬರುವುದು ಕಡ್ಡಾಯವಲ್ಲ. ಆನ್ ಲೈನ್ ಮೂಲಕವೂ ಶಿಕ್ಷಣ ಮುಂದುವರಿಸಬಹುದು ಎಂದರು.

ಕಳೆದ ನವೆಂಬರ್ ನಲ್ಲಿ ಸಭೆ ನಡೆಸಿದ್ದಾಗ ಡಿಸೆಂಬರ್ ಚಳಿ ಹೆಚ್ಚಿರುವ ಕಾರಣ ಆಗ ಶಾಲೆ ಪ್ರಾರಂಭ ಬೇಡ ಎಂಬ ಸಲಹೆ ಕೇಳಿ ಬಂದಿತ್ತು. ಬಳಿಕ ಡಿಸೆಂಬರ್ ನಲ್ಲಿ ಮತ್ತೊಂದು ಸಭೆ ನಡೆಸಿ, ಜನವರಿಯಿಂದ ಅರ್ಧ ದಿನ ಶಾಲೆ ತೆರೆದಿದ್ದೆವು. ಫೆಬ್ರವರಿ 1 ರಿಂದ 9 ರಿಂದ ಪ್ರಥಮ ಪಿಯುಸಿ ವರೆಗಿನ ತರಗತಿ ಆರಂಭಿಸಿದ್ದೇವೆ. ಶಾಲೆಗೆ ಹಾಜರಾಗುವುದು ಕಡ್ಡಾಯವಲ್ಲ ಎಂದು ಹೇಳಿದರು.

ಶಾಲೆಗೆ ಬರುವವರು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕೆಂದು ತಿಳಿಸಿದ್ದೇವು. 6 ರಿಂದ 8ರವರೆಗೆ ವಿದ್ಯಾಗಮ ಆರಂಭಿಸಿದ್ದೆವು. ಈಗ 1 ರಿಂದ ಎಲ್ಲಾ ತರಗತಿಗಳನ್ನು ಆರಂಭಿಸಿ ಎಂದು ಪೋಷಕರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಒತ್ತಡ ಹೇರಿದ್ದಾರೆ. ಶಾಲೆ ಆರಂಭಿಸುವ ಕುರಿತು ಆಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯ ಕರ್ನಾಟಕ, ಉತ್ತರಖಂಡ್, ಚತ್ತೀಸ್ ಘಡ, ಮಹಾರಾಷ್ಟದಲ್ಲಿ ಸರ್ವೆ ನಡೆಸಿದ್ದು, ಶೇ.90 ರಷ್ಟು ಮಕ್ಕಳು ಗಣಿತ ಮರೆತಿದ್ದು, ಶೇ.80 ರಷ್ಟು ಮಕ್ಕಳು ಅಕ್ಷರವನ್ನೇ ಮರೆತಿದ್ದಾರೆ ಎಂದು ವರದಿ ನೀಡಿದೆ ಎಂದರು.

ಈ ಸಂಬಂಧ ಸಿಬಿಎಸ್ಸಿಯವರು ಏಪ್ರಿಲ್ 1 ರಿಂದ ಪೂರ್ಣ ಶಾಲೆ ಆರಂಭಿಸಿ ಎಂದು ಸುತ್ತೋಲೆ ಹೊರಡಿಸಿದ್ದಾರೆ. ಹೀಗಾಗಿ ಇಂದು ತಾಂತ್ರಿಕ ತಜ್ಙರ ಸಮಿತಿ ರಚಿಸಿ ವಿವಿಧ ರಾಜ್ಯಗಳ ಶೈಕ್ಷಣಿಕ ಚಟುವಟಿಕೆ ಬಗ್ಗೆ ಚರ್ಚೆ ನಡೆಸಿದ್ದೇವೆ. ದೆಹಲಿಯಲ್ಲಿ 9 ರಿಂದ 10 ತರಗತಿಗಳು ತೆರೆದಿವೆ. ಕೇರಳದಲ್ಲಿ 10 ರಿಂದ ಮೇಲ್ಪಟ್ಟ ಶಾಲೆಗಳು ತೆರೆದಿವೆ. ಹರಿಯಾಣದಲ್ಲಿ 6 ನೇ ತರಗತಿಯಿಂದಲೇ ಶಾಲೆಗಳು ಆರಂಭಿಸಿವೆ. ಇನ್ನು ಪಂಜಾಬ್ ನಲ್ಲಿ 1 ತರಗತಿಯಿಂದ ಪಾಠ ನಡೆದಿವೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದರು.

ಕೇರಳದಲ್ಲಿ ಮತ್ತೊಮ್ಮೆ ಸೋಂಕು ಹರಡುತ್ತಿದೆ. ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜಿನಲ್ಲಿ ಸೋಂಕು ಕಂಡು ಬಂದಿದೆ. ಬೆಂಗಳೂರಿನ ಎರಡು ಅಪಾರ್ಟ್ ಮೆಂಟ್ ನಲ್ಲೂ ಸೋಂಕು ವ್ಯಾಪಿಸಿದೆ. ಬೆಂಗಳೂರು ನಗರ, ಕೇರಳದ ಗಡಿ ಭಾಗದಲ್ಲಿ ಸ್ವಲ್ಪ ನಿಧಾನವಾಗಿ ಶಾಲೆ ಆರಂಭಿಸುತ್ತೇವೆ. ಈ ಭಾಗದಲ್ಲಿ 8 ನೇ ತರಗತಿ ಪ್ರಾರಂಭಿಸುತ್ತೇವೆ. 6 ಮತ್ತು 7 ನೇ ತರಗತಿ ನಡೆಸುವುದಿಲ್ಲ. ಕೇರಳದಿಂದ ಬರುವವರು ಕೋವಿಡ್ ಟೆಸ್ಟ್ ಗೆ ಒಳಗಾಗಬೇಕು. ಶಿಕ್ಷಕರು ಕೋವಿಡ್ ಟೆಸ್ಟ್ ಮಾಡಿಸಬೇಕು. ಮಕ್ಕಳು ಶಿಕ್ಷಕರು ಒಟ್ಟಾಗಿ ಪರೀಕ್ಷೆ ಮಾಡಿಸಬೇಕು. ಶಾಲೆಗಳಲ್ಲೂ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳ ಕೊಠಡಿ ಲಭ್ಯತೆ, ವಿದ್ಯಾರ್ಥಿ ಸಂಖ್ಯೆ ಆಧರಿಸಿ ಕ್ರಮ ಕೈಗೊಂಡು ಶಾಲೆ ಪ್ರಾರಂಭಕ್ಕೆ ಅವಕಾಶ ನೀಡಲಾಗುವುದು. ಮಕ್ಕಳ ಹಾಜರಾತಿ ಕಡ್ಡಾಯವಿಲ್ಲ ಎಂದರು.

ಸಮಾಜ ಕಲ್ಯಾಣ, ಒಬಿಸಿ ಹಾಸ್ಟೆಲ್ ನಲ್ಲಿಯೂ ಶಾಲೆಗಳನ್ನು ನಡೆಸಲು ತಯಾರಿ ಮಾಡಿಕೊಳ್ಳಲಾಗುತ್ತದೆ. ಮಕ್ಕಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಸಾರಿಗೆ ಇಲಾಖೆ ವಿವಿಧ ನಿಗಮಗಳಿಂದ ಹೆಚ್ಚು ಟ್ರಿಪ್ ಓಡಿಸಬೇಕೆಂಬ ಬಗ್ಗೆ ಸಾರಿಗೆ ಇಲಾಖೆಗೆ ಮನವಿ ಮಾಡಿದ್ದೇನೆ. ಈ ಬಗ್ಗೆ ನಾಳೆ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸುತ್ತೇವೆ. ಫೆಬ್ರವರಿ 24, 25 ರಂದು ಮತ್ತೊಂದು ಸಭೆ ನಡೆಸಿ 1 ರಿಂದ 5 ರವರೆಗೆ ವಿದ್ಯಾಗಮ ಬಗ್ಗೆ ತೀರ್ಮಾನಿಸುತ್ತೇವೆ. ಭಾನುವಾರ ಎರಡು ಸರ್ವೆ ವರದಿ ಬರಲಿದ್ದು, ವರದಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

LEAVE A REPLY

Please enter your comment!
Please enter your name here

State

ಗೋಕಾಕ ಫಾಲ್ಸ ಸೇತುವೆ ಕಾಮಗಾರಿ ಜುಲೈ ಒಳಗೆ ಪೂರ್ಣಗೊಳಿಸಲು ಸೂಚನೆ

ಗೋಕಾಕ: ಫೆ.28- ಗೋಕಾಕ ಫಾಲ್ಸ ನಡುವೆ ನಿರ್ಮಾಣ ಹಂತದಲ್ಲಿರುವ 15.54 ಕೋಟಿ ರೂ ವೆಚ್ಚ ದ ಸೇತುವೆ ಕಾಮಗಾರಿಯನ್ನು ಜುಲೈನೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು. ಜಲಸಂಪನ್ಮೂಲ ಸಚಿವ ರಮೇಶ...

ಕಾಂಗ್ರೆಸ್ ನಾಯಕರ ಹೆಸರಲ್ಲಿ ವಂಚಿಸಿದ್ದ ಮಹಿಳಾ ಕಾರ್ಯಕರ್ತೆ ಉಚ್ಛಾಟನೆ

ಹುಬ್ಬಳ್ಳಿ: 1- ಪಕ್ಷದ ಮುಖಂಡರ ಹೆಸರು ಬಳಸಿಕೊಂಡು ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ ಅವರ ಬಳಿ ಕಡಿಮೆ...

ಪ್ರಾಸಂಗಿಕ ಕರಾರಿನ ಮೇಲೆ ಬಸ್ ಸೌಲಭ್ಯ

ಬೆಳಗಾವಿ: ಫೆ.28 : ಚಿಕ್ಕೋಡಿ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ ಹಾಗೂ ಮಾನ್ಯತೆ ಪಡೆದ ಶಾಲಾ/ಕಾಲೇಜುಗಳಿಗೆ ಶೈಕ್ಷಣಿಕ ಪ್ರವಾಸಕ್ಕಾಗಿ ವಾಹನಗಳನ್ನು ಪ್ರಾಸಂಗಿಕ ಕರಾರಿನ ಮೇಲೆ ಪಡೆಯಲು...

ಬಸ್ ದರ ಹೆಚ್ಚಳವಿಲ್ಲ

ವಿಜಯಪುರ: ಫೆ 27 - ಬಿಎಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ...

National

ಕೆಂಪುಕೋಟೆ ಹಿಂಸಾಚಾರಗಳ ಹಿಂದೆ ಕೇಂದ್ರದ ಕೈವಾಡ -ಕೇಜ್ರಿವಾಲ್

ಮೀರತ್: ಫೆ 28- ಕೇಂದ್ರ ಸರ್ಕಾರ ತಂದಿರುವ ಹೊಸ ಕೃಷಿ ಕಾಯ್ದೆಗಳ ವಿರುದ್ಧ ರೈತರು ಮೂರು ತಿಂಗಳುಗಳಿಂದ ನಡೆಸುತ್ತಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ, ಅರವಿಂದ ಕೇಜ್ರಿವಾಲ್ ಮತ್ತೊಮ್ಮೆ...

“ಮನ್ ಕಿ ಬಾತ್ ಸಾಕು, ಜಾಬ್ ಕಿ ಬಾತ್” ಮಾತಾಡಿ ಎಂದ ಯುವ ಪೀಳಿಗೆ

ಹೊಸದಿಲ್ಲಿ: 1- ಇಂದು ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ ಇನ್ನಿಲ್ಲದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಯುವಜನರು ಯೂಟ್ಯೂಬ್, ಟ್ವಿಟರ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ನರೇಂದ್ರ ಮೋದಿಯವರ...

4 ರಾಜ್ಯಗಳ ಚುನಾವಣೆ ಘೋಷಣೆ

ನವದೆಹಲಿ: ಫೆ 26 - ವಿಧಾನಸಭಾ ಅವಧಿ ಪೂರ್ಣಗೊಳ್ಳಲಿರುವ ಐದು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ವೇಳಾಪಟ್ಟಿ ಪ್ರಕಟಿಸಿದೆ. ಅಸ್ಸಾಂ ರಾಜ್ಯವು ಮಾ. 27, ಏ 1 ಮತ್ತು...

ಪತ್ನಿಯು ಪತಿಯ ಆಸ್ತಿಯಲ್ಲ

ಮುಂಬೈ: ಫೆ 26- ಚಹಾ ನೀಡಲು ನಿರಾಕರಿಸುವ ಮೂಲಕ ಪತ್ನಿ ಹಲ್ಲೆ ನಡೆಸಲು ಪ್ರಚೋದನೆ ನೀಡಿದ್ದಳು ಎಂಬುದನ್ನು ಒಪ್ಪಲಾಗದು. ಪತ್ನಿಯನ್ನು ಪ್ರಾಣಿಯಂತೆ ನೋಡುವುದು ಸರಿಯಲ್ಲ, ಆಕೆ ಒಂದು ಪಶು ಅಥವಾ ವಸ್ತುವಲ್ಲ ಎಂದು...

International

ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕೊರೋನ ಲಸಿಕೆಯ ನಂತರ 16 ಜನರ ಸಾವು

ಮಾಸ್ಕೋ: ಫೆ .27 - ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕರೋನ ಲಸಿಕೆ ಹಾಕಿದ ನಂತರ ಪ್ರತಿಕ್ರಿಯೆ ಉಂಟಾಗಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಸ್ವಿಸ್ ಏಜೆನ್ಸಿ ಫಾರ್ ಥೆರಪೂಟಿಕ್ ಪ್ರಾಡಕ್ಟ್ಸ್ (ಸ್ವಿಸ್ಮೆಡಿಕ್) ತಿಳಿಸಿದೆ. ವಾಚ್‌ಡಾಗ್ ವರದಿಯ...

ಅಮೆರಿಕಾದ ಸಾಲವೆಷ್ಟು ?

ವಾಷಿಂಗ್ಟನ್: ಫೆ 27- ಜಗತ್ತಿನ ದೊಡ್ಡಣ್ಣ ಎಂದೇ ಹೆಸರಾಗಿರುವ ಅಮೆರಿಕಾದ ಸಾಲ ದಿನ ದಿನಕ್ಕೂ ಹೆಚ್ಚುತ್ತಿದೆ ಎಂದು ಆ ದೇಶದ ಶಾಸನ ಸಭೆಯ ಪ್ರಮುಖ ಸದಸ್ಯ ಅಲೆಕ್ಸ್ ಮೂನಿ ಅಲ್ಲಿನ ಸರ್ಕಾರವನ್ನು ಎಚ್ಚರಿಸಿದ್ದಾರೆ. ಹೆಚ್ಚಿನ...

ಧ್ವಂಸಗೊಂಡ ಹಿಂದೂ ದೇವಾಲಯ ಕೂಡಲೇ ನಿರ್ಮಾಣಕ್ಕೆ ಪಾಕ್ ಕೋರ್ಟ ಆದೇಶ

ಇಸ್ಲಾಮಾಬಾದ: 9- ದುಷ್ಕರ್ಮಿಗಳಿಂದ ಧ್ವಂಸಗೊಂಡಿರುವ ಶತಮಾನಗಳ ಇತಿಹಾಸ ಹೊಂದಿದ್ದ ಹಿಂದೂ ದೇವಾಲಯವನ್ನು ಕೂಡಲೇ ಪುನರ್ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಪಾಕಿಸ್ತಾನ ಸುಪ್ರೀಮ ಕೋರ್ಟ ಆದೇಶಿಸಿದೆ. ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಸಮಯದ ಬಗ್ಗೆ...

ಕೋವಿಡ್ ರೋಗಿಗಳಿಗೆ ಕ್ಷಯರೋಗದ ಅಪಾಯವಿದೆ : ರಶಿಯಾ

ಮಾಸ್ಕೊ, ಫೆ 08- ಕೊರೋನಾ ವೈರಸ್ ಸೋಂಕಿಗೆ ಒಳಗಾದ ರೋಗಿಗಳಿಗೆ ಕ್ಷಯರೋಗ ಬರುವ ಸಾಧ್ಯತೆ ಹೆಚ್ಚು ಎಂದು ರಷ್ಯಾದ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. "ಕೋವಿಡ್ -19 ನಿಂದ ಬಳಲಿದ ನಂತರ ಅನೇಕ ರೋಗಿಗಳು ಶ್ವಾಸಕೋಶದಲ್ಲಿ...

Entertainment

ಇಂದು ಧಾರವಾಡದಲ್ಲಿ ಬೆಳವಡಿ ಮಲ್ಲಮ್ಮ ನಾಟಕ

ಧಾರವಾಡ: 14- ಹುಬ್ಬಳ್ಳಿಯ ಜೀವಿ ಕಲಾ ಬಳಗದ ಅಧ್ಯಕ್ಷರಾದ ಗದಿಗೆಯ್ಯಾ ಹಿರೇಮಠ ಅವರು ರಚಿಸಿ ನಿರ್ದೇಶಿಸಿದ ಐತಿಹಾಸಿಕ " ಸಮರ ಸಿಂಹಿಣಿ ಬೆಳವಡಿ ಮಲ್ಲಮ್ಮ" ನಾಟಕವು ರವಿವಾರ ದಿ ೧೪- ೨ -೨೦೨೧ ರಂದು ಪ್ರದರ್ಶನಗೊಳ್ಳಲಿದೆ. ಬೆಳವಡಿಯ ನೇತಾಜಿ ತರುಣ...

ಮಾರುಕಟ್ಟೆ ಗಿಜಿಗುಡುವಾಗ ಚಿತ್ರಮಂದಿರವೇಕೆ ಖಾಲಿ?

ಬೆಂಗಳೂರು, ಫೆ 03- “ಬಸ್ ಫುಲ್, ಮಾರ್ಕೆಟ್ ಗಿಜಿ ಗಿಜಿ ಆದರೆ ಚಿತ್ರ ಮಂದಿರಗಳೇಕೆ ಭಣಗುಡಬೇಕು” ಎಂದು ನಟ ಧ್ರುವ ಸರ್ಜಾ ಮಾಡಿರುವ ಟ್ವೀಟ್ ಗೆ ಕನ್ನಡ ಚಿತ್ರರಂಗದ ಬಹುತೇಕ ನಟ, ನಿರ್ದೇಶಕರು...

ಜ. 24ರಂದು ವರುಣ ಧವನ್-ನತಾಶಾ ಮದುವೆ

ಮುಂಬೈ, ಜ 15 - ಖ್ಯಾತ ನಿರ್ಮಾಪಕ, ನಿರ್ದೇಶಕ ಡೇವಿಡ್ ಧವನ ಪುತ್ರ ನಟ ವರುಣ ಧವನ್ ಅವರು ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇದೇ...

‘ಲಂಕಾಸುರ’ ಚಿತ್ರಕ್ಕೆ ಚಾಲನೆ

ಬೆಂಗಳೂರು, ಜ 15 - ಸುಗ್ಗಿ ಹಬ್ಬ ಸಂಕ್ರಾಂತಿಯ ಸಂಭ್ರಮದಂದು ವಿನೋದ ಪ್ರಭಾಕರ ಹಾಗೂ ಲೂಸ್ ಮಾದ ಅಭಿನಯದ ‘ಲಂಕಾಸುರ’ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಎ.ಎಂ.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಾವತಿ ಮುನಿಸ್ವಾಮಿ ಅವರು ನಿರ್ಮಿಸುತ್ತಿರುವ...

Sports

ಭಾರತಕ್ಕೆ 317 ರನ್ ಜಯ

ಚೆನ್ನೈ, ಫೆ 16- ಭಾರತದ ಬಲಿಷ್ಠ ಸ್ಪಿನ್ ಕೋಟೆಯನ್ನು ಭೇದಿಸುವಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ವಿಫಲವಾಗಿದ್ದು, ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ ಪಡೆ 1-1 ರಿಂದ ಸಮಬಲ ಸಾಧಿಸಿದೆ. ನಿರೀಕ್ಷೆಯಂತೆ ಮಂಗಳವಾರ ಭಾರತ...

ಗೆಲುವಿನ ಹೊಸ್ತಿಲಲ್ಲಿ ಭಾರತ

ಚೆನ್ನೈ: ಫೆ 15 - ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಅವರ ಶತಕ ಹಾಗೂ ನಾಯಕ ವಿರಾಟ ಕೊಹ್ಲಿ ಅವರ ಅರ್ಧ ಶತಕದ ನೆರವಿನಿಂದ ಭಾರತ ನೀಡಿದ 482 ರನ್ ಗೆಲುವಿನ ಗುರಿ...

ಚೆನ್ನೈ ತಲುಪಿದ ಇಂಗ್ಲೆಂಡ್ ಕ್ರಿಕೆಟ್ ತಂಡ

ನವದೆಹಲಿ, ಜ.24 - ಫೆಬ್ರವರಿ 5 ರಿಂದ ಭಾರತ ವಿರುದ್ಧದ ಟೆಸ್ಟ್ ಸರಣಿಗಾಗಿ ವೇಗದ ಬೌಲರ್ ಜೋಫ್ರಾ ಆರ್ಚರ್, ಆಲ್‌ರೌಂಡರ್ ಬೆನ್ ಸ್ಟೋಕ್ಸ್, ಬ್ಯಾಟ್ಸ್‌ಮನ್ ರೋರಿ ಬರ್ನ್ಸ್ ಮತ್ತು ಜೊನಾಥನ್ ಟ್ರಾಟ್ ಸೇರಿದಂತೆ...

ರಹಾನೆ ಮತ್ತು ಇತರ ಆಟಗಾರರಿಗೆ ಕ್ವಾರಂಟೈನ್ ವಿನಾಯಿತಿ

ನವದೆಹಲಿ, ಜ.21- ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗಾವಸ್ಕರ್ ಟ್ರೋಫಿಯನ್ನು ಗೆದ್ದು ಗುರುವಾರ ಬೆಳಿಗ್ಗೆ ಮುಂಬೈಗೆ ಮರಳಿದ ನಾಯಕ ಅಜಿಂಕ್ಯ ರಹಾನೆ ಮತ್ತು ಇತರ ನಾಲ್ಕು ಭಾರತೀಯ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರ ಕ್ವಾರಂಟೈನ್ ನಿಂದ ವಿನಾಯಿತಿ...