ಪುಣೆ: 18- ಬ್ಯಾಟಿಂಗ್ ಮಾಡುವಾಗ ನಾನ್ ಸ್ಟ್ರೈಕರ್ ತುದಿಯಲ್ಲಿ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ ಘಟನೆಯ ವಿಡಿಯೋ ಬುಧವಾರ ಎಲ್ಲೆಡೆ ವೈರಲ್ ಆಗಿತ್ತು.
ಪುಣೆ ಜಿಲ್ಲೆಯ ಜುನ್ನಾರ್ನಲ್ಲಿ ಬುಧವಾರ ಕ್ರಿಕೆಟ್ ಪಂದ್ಯವೊಂದರಲ್ಲಿ ಆಡುತ್ತಿದ್ದಾಗ 47 ವರ್ಷದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಬು ನಲ್ವಾಡೆ ಎಂದು ಗುರುತಿಸಲ್ಪಟ್ಟ ಆಟಗಾರನನ್ನು ತೋರಿಸುವ ವಿಡಿಯೋ ವೈರಲ್ ಆಗಿದೆ. ಜಾಧವಾಡಿ ಗ್ರಾಮದ ಬಳಿ ಆಯೋಜಿಸಿದ್ದ ಸ್ಥಳೀಯ ಪಂದ್ಯಾವಳಿಯಲ್ಲಿ ಈ ಘಟನೆ ನಡೆದಿದೆ.