INDIA COVID-19 Statistics

11,043,925
Confirmed Cases
Updated on 24/02/2021 4:17 PM
152,884
Total active cases
Updated on 24/02/2021 4:17 PM
156,713
Total deaths
Updated on 24/02/2021 4:17 PM
Wednesday, February 24, 2021

INDIA COVID-19 Statistics

11,043,925
Total confirmed cases
Updated on 24/02/2021 4:17 PM
152,884
Total active cases
Updated on 24/02/2021 4:17 PM
156,713
Total deaths
Updated on 24/02/2021 4:17 PM
10,734,328
Total recovered
Updated on 24/02/2021 4:17 PM
Home National New Delhi ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಮುಖ ಮೈಲಿಗಲ್ಲು: ಮೋದಿ

ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಮುಖ ಮೈಲಿಗಲ್ಲು: ಮೋದಿ

ನವದೆಹಲಿ: ಫೆ.19- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ವಿಶ್ವಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು.
ಭಾಷಣದಲ್ಲಿ ಪ್ರಧಾನಿ, ಸಮಗ್ರ ಭಾರತಕ್ಕೆ ಮತ್ತು ತಮಗೆ ಸ್ಫೂರ್ತಿ ನೀಡಿದ್ದ ವೀರ ಶಿವಾಜಿ ಕುರಿತು ಗುರುದೇವ್ ರವೀಂದ್ರನಾಥ್ ಠ್ಯಾಗೂರ್ ಅವರು ಬರೆದಿದ್ದ ಪದ್ಯವನ್ನು ಉಲ್ಲೇಖಿಸಿದರು. ಇಲ್ಲಿನ ವಿದ್ಯಾರ್ಥಿಗಳು ಮತ್ತು ಬೋಧನಾ ಸಿಬ್ಬಂದಿ ಕೇವಲ ವಿಶ್ವವಿದ್ಯಾಲಯದ ಭಾಗವಲ್ಲ ಅವರು, ಕ್ರಿಯಾಶೀಲ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿರುವವರು ಎಂದು ಪ್ರಧಾನಮಂತ್ರಿ ಬಣ್ಣಿಸಿದರು.
ಗುರುದೇವ ಅವರು ವಿಶ್ವವಿದ್ಯಾಲಯಕ್ಕೆ ವಿಶ್ವಭಾರತಿ ಎಂದು ಹೆಸರಿಟ್ಟಿರುವುದು ಜಾಗತಿಕ ವಿಶ್ವವಿದ್ಯಾಲಯವಾಗಬೇಕು ಎಂದು ಬಯಸಿ ಯಾರೇ ವಿಶ್ವಭಾರತಿಗೆ ಕಲಿಯುವುದಕ್ಕೆ ಬಂದರೂ ಭಾರತೀಯ ಮತ್ತು ಭಾರತೀಯತೆಯ ದೃಷ್ಟಿಕೋನದಿಂದ ಇಡೀ ಜಗತ್ತನ್ನು ನೋಡುವಂತಾಗಬೇಕು. ಹಾಗಾಗಿ ವಿಶ್ವಭಾರತಿ ಕಲಿಕೆಯಲ್ಲಿ ಅತ್ಯುನ್ನತ ಸ್ಥಾನದಲ್ಲಿದ್ದು, ಅದನ್ನು ಭಾರತದ ಶ್ರೀಮಂತ ಪರಂಪರೆಯಂತೆ ಕಾಣಲಾಗುತ್ತಿದೆ. ಭಾರತೀಯ ಪರಂಪರೆಯ ಕುರಿತ ಸಂಶೋಧನೆಯ ವಿವರಗಳನ್ನು ಮತ್ತು ಬಡವರಲ್ಲಿ ಬಡವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕಾರ್ಯಗಳ ಬಗ್ಗೆ ಪ್ರಚುರಪಡಿಸಬೇಕು. ಗುರುದೇವ ಠ್ಯಾಗೂರ್ ಅವರ ವಿಶ್ವಭಾರತಿ ಕೇವಲ ಜ್ಞಾನಾರ್ಜನೆಗೆ ಸೀಮಿತವಾದ ಕೇಂದ್ರವಾಗಿರಲಿಲ್ಲ. ಅದು ಭಾರತೀಯ ಸಂಸ್ಕೃತಿಯ ಅಗ್ರ ಗುರಿಯಾದ ಸ್ವಾವಲಂಬನೆ ಸಾಧಿಸುವ ಪ್ರಯತ್ನವಾಗಿತ್ತು ಎಂದು ಹೇಳಿದರು.
ಭಿನ್ನ ಆದರ್ಶಗಳು ಮತ್ತು ಭಿನ್ನಾಭಿಪ್ರಾಯಗಳ ನಡುವೆಯೇ ನಮ್ಮನ್ನು ನಾವು ಸಂಶೋಧಿಸಿಕೊಳ್ಳಬೇಕು ಎಂದು ಗುರುದೇವ ಅವರು ನಂಬಿದ್ದರು. ಠ್ಯಾಗೂರ್ ಅವರು ಬಂಗಾಳಕ್ಕೆ ಹೆಮ್ಮೆ. ಭಾರತೀಯ ವೈವಿಧ್ಯದ ಬಗ್ಗೆಯೂ ಸಮಾನ ಹೆಮ್ಮೆ ಹೊಂದಿದ್ದರು ಎಂದು ಹೇಳಿದರು. ಗುರುದೇವ್ ಅವರ ದೂರದೃಷ್ಟಿಯಿಂದಾಗಿ ಶಾಂತಿನಿಕೇತನದ ಮುಕ್ತ ಆಕಾಶದಲ್ಲಿ ಮಾನವೀಯತೆ ಜೀವಂತವಾಗಿದೆ ಎಂದು ಅವರು ಹೇಳಿದರು.
ವಿಶ್ವಭಾರತಿ ಜ್ಞಾನದ ಸಮುದ್ರದಲ್ಲಿ ಎಂದಿಗೂ ಅಂತ್ಯಕಾಣದ ಸ್ಥಳವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದಕ್ಕೆ ಅನುಭವ ಆಧಾರಿತ ಶಿಕ್ಷಣದ ಪದ್ಧತಿಯ ತಳಹದಿ ಇದೆ ಎಂದ ಅವರು ಸೃಜನಶೀಲತೆ ಮತ್ತು ಜ್ಞಾನಕ್ಕೆ ಯಾವುದೇ ಮಿತಿ ಇಲ್ಲ ಎಂದರು. ಈ ಚಿಂತನೆಯೊಂದಿಗೆ ಗುರುದೇವ ಅವರು ಈ ಶ್ರೇಷ್ಠ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದರು. ವಿದ್ಯಾರ್ಥಿಗಳು ಜ್ಞಾನ, ಚಿಂತನೆ ಮತ್ತು ಕೌಶಲ್ಯ ಅವು ಸ್ಥಿರವಲ್ಲ, ಅವು ಸದಾ ಚಲನಶೀಲ ಮತ್ತು ನಿರಂತರ ಪ್ರಕ್ರಿಯೆಗಳಾಗಿರುತ್ತವೆ ಎಂಬುದನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಪ್ರಧಾನಮಂತ್ರಿ ಹೇಳಿದರು. ಹೊಣೆಗಾರಿಕೆ ಜ್ಞಾನ ಮತ್ತು ಶಕ್ತಿಯಿಂದ ಬರುತ್ತದೆ ಎಂದರು. ಅಧಿಕಾರವಿದ್ದಾಗ ಗಂಭೀರವಾಗಿರಬೇಕು ಮತ್ತು ತಮ್ಮಲ್ಲಿ ಸಂಯಮ ಕಾಯ್ದುಕೊಳ್ಳಬೇಕು. ಪ್ರತಿಯೊಬ್ಬ ವಿದ್ವಾಂಸರು ಜ್ಞಾನ ಇಲ್ಲದವರಿಗೆ ಜ್ಞಾನ ನೀಡುವ ಹೊಣೆಗಾರಿಕೆಯನ್ನು ವಹಿಸಿಕೊಳ್ಳಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನಿಮ್ಮ ಜ್ಞಾನ ಅದು ನಿಮಗೆ ಮಾತ್ರ ಸೇರಿದ್ದಲ್ಲ, ಅದು ಸಮಾಜಕ್ಕೆ ಸೇರಿದ್ದು, ಅದು ನಮ್ಮ ದೇಶದ ಪರಂಪರೆ ಎಂದು ಹೇಳಿದರು. ನಿಮ್ಮ ಜ್ಞಾನ ಮತ್ತು ಕೌಶಲ್ಯ ರಾಷ್ಟ್ರಕ್ಕೆ ಹೆಮ್ಮೆ ತರುವಂತೆ ಮಾಡುತ್ತದೆ ಅಥವಾ ಸಮಾಜವನ್ನು ಅಪಪ್ರಚಾರ ಮತ್ತು ವಿನಾಶದ ಕತ್ತಲೆಯಲ್ಲಿ ತಳ್ಳಬಹುದು. ವಿಶ್ವದಾದ್ಯಂತ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುತ್ತಿರುವ ಬಹುತೇಕರು ಉತ್ತಮ ಶಿಕ್ಷಣ ಪಡೆದವರು ಮತ್ತು ಉತ್ತಮ ಕೌಶಲ್ಯ ಹೊಂದಿದವರಾಗಿದ್ದಾರೆ ಎಂದು ಅವರು ಹೇಳಿದರು.
ಮತ್ತೊಂದೆಡೆ ಜನರು ತಮ್ಮ ಜೀವಕ್ಕೆ ಅಪಾಯ ತಂದುಕೊಂಡು ಆಸ್ಪತ್ರೆಗಳಲ್ಲಿ ಮತ್ತು ಪ್ರಯೋಗಾಲಯಗಳಲ್ಲಿ ಕೆಲಸ ಮಾಡಿ ಕೋವಿಡ್‌ನಂತಹ ಸಾಂಕ್ರಾಮಿಕದಿಂದ ಜನರನ್ನು ಉಳಿಸುತ್ತಿದ್ದಾರೆ ಎಂದರು. ಇದು ಆದರ್ಶವಲ್ಲ ಆದರೆ ಮನೋಭಾವ. ಅದು ಸಕಾರಾತ್ಮಕವಾಗಿರಬಹುದು ಅಥವಾ ನಕಾರಾತ್ಮಕವಾಗಿರಬಹುದು. ಎರಡಕ್ಕೂ ವ್ಯಾಪ್ತಿ ಇದೆ ಮತ್ತು ಎರಡೂ ಮಾರ್ಗಗಳು ಮುಕ್ತವಾಗಿವೆ. ಹಾಗಾಗಿ ವಿದ್ಯಾರ್ಥಿಗಳು ತಾವು ಸಮಸ್ಯೆಯ ಭಾಗವಾಗಬೇಕೆ ಅಥವಾ ಪರಿಹಾರದ ಭಾಗವಾಗಬೇಕೆ ಎಂಬುದನ್ನು ನಿರ್ಧರಿಸಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ಕರೆ ನೀಡಿದರು. ಅವರು ರಾಷ್ಟ್ರ ಮೊದಲು ಎನ್ನುವ ಚಿಂತನೆಯನ್ನು ಆಯ್ದುಕೊಂಡರೆ ಅವರ ನಿರ್ಧಾರ ಕೆಲವು ಪರಿಹಾರಗಳತ್ತ ಸಾಗುವಂತೆ ಮಾಡುತ್ತದೆ. ನಿರ್ಧಾರಗಳನ್ನು ಕೈಗೊಳ್ಳುವಾಗ ಯಾವುದೇ ಹೆದರಿಕೆ ಪಡುವ ಅಗತ್ಯವಿಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಎಲ್ಲಿಯವರೆಗೆ ದೇಶದ ಯುವಜನತೆಯಲ್ಲಿ ಹೊಸ ಆವಿಷ್ಕಾರಗಳ ಮನಸ್ಥಿತಿ ಇರುತ್ತದೋ, ಅಪಾಯಗಳನ್ನು ಸ್ವೀಕರಿಸಲಾಗುತ್ತದೆಯೋ ಮತ್ತು ಮುನ್ನಡೆಯಲಾಗುತ್ತದೆಯೋ ಅಲ್ಲಿಯವರೆಗೆ ದೇಶದ ಭವಿಷ್ಯದ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದು ಹೇಳಿದರು. ಆ ನಿಟ್ಟಿನಲ್ಲಿ ದೇಶದ ಯುವಕರಿಗೆ ಸರ್ಕಾರ ಎಲ್ಲ ಬೆಂಬಲ ನೀಡಲಿದೆ ಎಂದು ಅವರು ಭರವಸೆ ನೀಡಿದರು.
ಸಾಂಪ್ರದಾಯಿಕ ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಐತಿಹಾಸಿಕ ಸಾಮರ್ಥ್ಯವನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿ ಅವರು, ಗಾಂಧಿವಾದಿ ಶ್ರೀ ಧರ್ಮಪಾಲರ ಕೃತಿ ‘ದಿ ಬ್ಯೂಟಿಫುಲ್ ಟ್ರೀ – ಇಂಡಿಜೀನಸ್ ಇಂಡಿಯನ್ ಎಜುಕೇಷನ್ ಇನ್ ದಿ ಎಯ್ಟೀನ್ತ್ ಸೆಂಚುರಿ’ ಕೃತಿಯನ್ನು ಉಲ್ಲೇಖಿಸಿದರು. 1820ರ ಸಮೀಕ್ಷೆಯಂತೆ ಪ್ರತಿಯೊಂದು ಗ್ರಾಮದಲ್ಲೂ ಒಂದಕ್ಕಿಂತ ಅಧಿಕ ಗುರುಕುಲಗಳಿದ್ದವು. ಅವುಗಳು ಸ್ಥಳೀಯ ದೇವಸ್ಥಾನಗಳೊಂದಿಗೆ ಸಂಯೋಜನೆ ಹೊಂದಿದ್ದವು ಮತ್ತು ಸಾಕ್ಷರತೆಯ ಪ್ರಮಾಣ ತುಂಬಾ ಅಧಿಕವಾಗಿತ್ತು ಎಂದು ಅಂದಾಜಿಸಲಾಗಿದೆ. ಇದನ್ನು ಬ್ರಿಟೀಷ್ ವಿದ್ವಾಂಸರು ಸಹ ಗುರುತಿಸಿದ್ದರು. ಗುರುದೇವ ರವೀಂದ್ರನಾಥ ಅವರು, ಭಾರತೀಯ ಶಿಕ್ಷಣದ ಆಧುನೀಕರಣ ಮಾಧ್ಯಮವನ್ನು ಮತ್ತು ಜೀತಪದ್ಧತಿಯ ಸಂಕೋಲೆಯಿಂದ ಅದನ್ನು ಮುಕ್ತಗೊಳಿಸುವ ವ್ಯವಸ್ಥೆಯನ್ನು ವಿಶ್ವಭಾರತಿಯಲ್ಲಿ ಅಭಿವೃದ್ಧಿಪಡಿಸಿದ್ದರು ಎಂದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹಳೆಯ ನಿರ್ಬಂಧಗಳನ್ನು ಮುರಿದುಹಾಕುತ್ತದೆ ಮತ್ತು ವಿದ್ಯಾರ್ಥಿಗಳಿಗೆ ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಅರಿವು ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ. ಇದರಲ್ಲಿ ವಿಷಯಗಳ ಆಯ್ಕೆ ಮತ್ತು ಬೋಧನಾ ಮಾಧ್ಯಮಗಳ ಆಯ್ಕೆಯಲ್ಲಿ ಸರಳೀಕರಣಕ್ಕೆ ಅವಕಾಶವಿದೆ. ಈ ನೀತಿ ಉದ್ಯಮಶೀಲತೆಯನ್ನು ಮತ್ತು ಸ್ವ-ಉದ್ಯೋಗವನ್ನು ಸಂಶೋಧನಾ ಮತ್ತು ಆವಿಷ್ಕಾರವನ್ನು ಉತ್ತೇಜಿಸುವ ನೀತಿಯಾಗಿದೆ. ಆತ್ಮನಿರ್ಭರ ಭಾರತ ನಿರ್ಮಾಣ ನಿಟ್ಟಿನಲ್ಲಿ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಒಂದು ಮಹತ್ವದ ಮೈಲಿಗಲ್ಲಾಗಲಿದೆ ಎಂದು ಪ್ರಧಾನಮಂತ್ರಿ ಹೇಳಿದರು.
ವಿದ್ವಾಂಸರಿಗೆ ಲಕ್ಷಾಂತರ ಜರ್ನಲ್ ಗಳು ಉಚಿತವಾಗಿ ಲಭ್ಯವಾಗುವಂತೆ ಸರ್ಕಾರ ಇತ್ತೀಚೆಗೆ ಕ್ರಮ ಕೈಗೊಂಡಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ವರ್ಷದ ಬಜೆಟ್ ನಲ್ಲಿ ರಾಷ್ಟ್ರೀಯ ಸಂಶೋಧನಾ ಫೌಂಡೇಷನ್ ಮೂಲಕ ಐದು ವರ್ಷಗಳ ಕಾಲ ಸಂಶೋಧನೆಗೆ 50 ಸಾವಿರ ಕೋಟಿ ರೂ. ವ್ಯಯ ಮಾಡಲು ಉದ್ದೇಶಿಸಲಾಗಿದೆ. ಈ ಶಿಕ್ಷಣ ನೀತಿಯಲ್ಲಿ ಲಿಂಗ ಸೇರ್ಪಡೆ ನಿಧಿಗೆ ಅವಕಾಶ ಕಲ್ಪಿಸಲಾಗಿದ್ದು, ಅದು ಬಾಲಕಿಯರಿಗೆ ಹೊಸ ವಿಶ್ವಾಸವನ್ನು ತುಂಬಲಿದೆ. ಶಾಲೆಯಿಂದ ಹೊರಗುಳಿಯುತ್ತಿರುವ ಬಾಲಕಿಯರ ಪ್ರಮಾಣ ಹೆಚ್ಚಿರುವ ಬಗ್ಗೆ ಗಂಭೀರ ಅಧ್ಯಯನ ನಡೆಸಲಾಗಿದೆ ಮತ್ತು ಅವರಿಗೆ ಪ್ರವೇಶ – ನಿರ್ಗಮನ ಆಯ್ಕೆಯ ವ್ಯವಸ್ಥೆಗಳನ್ನು ಮತ್ತು ಪದವಿ ಕೋರ್ಸ್ ಗಳಲ್ಲಿ ವರ್ಷವಾರು ಅಂಕಗಳು ನೀಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

State

11 ತಿಂಗಳಲ್ಲಿ ಮೊದಲ ಬಾರಿಗೆ ಕೊರೋನಾ ಇಲ್ಲ

ಬೆಳಗಾವಿ: 22- ಕಳೆದ ಮಾರ್ಚ ತಿಂಗಳಲ್ಲಿ ದೇಶಕ್ಕೆ ಒಕ್ಕರಿಸಿದ ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲೆಯನ್ನೂ ಇನ್ನಿಲ್ಲದಂತೆ ಕಾಡಿತ್ತು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ದಿನವೊಂದಕ್ಕೆ ಸರಾಸರಿ 500 ರ ಗಡಿ ದಾಟುತ್ತಿದ್ದ ಸೋಂಕಿತರ...

ವಿವಾಹ ಸಮಾರಂಭಗಳಿಗೆ ಕಾವಲು; ದಂಡ ಬೀಳುತ್ತೆ ಹುಷಾರ್…!!

ಬೆಂಗಳೂರು: ಫೆ 22 - ಕೋವಿಡ್ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಆರೋಗ್ಯ ಇಲಾಖೆ ಇನ್ನುಮುಂದೆ ವಿವಾಹ ಸಮಾರಂಭಗಳಿಗೆ ಮಾರ್ಷಲ್ ಗಳನ್ನು ನಿಗಾವಹಿಸಲು ನೇಮಕ ಮಾಡಲಿದ್ದು ನಿಯಮ ಮೀರಿದರೆ ಸ್ಥಳದಲ್ಲೇ ದಂಡ ಬೀಳಲಿದೆ ಎಂದು...

ಒಡೆಯಿತು ಸಹನೆಯ ಕಟ್ಟೆ; ಯತ್ನಾಳ ಉಚ್ಚಾಟಿಸಲು ಯಡಿಯೂರಪ್ಪ ಆಗ್ರಹ

ಬೆಂಗಳೂರು: 22- ಪಕ್ಷದ ಆದೇಶ ಹಾಗು ಶಿಸ್ತು ಉಲ್ಲಂಘಿಸಿ ತಮ್ಮ ಹಾಗೂ ಕುಟುಂಬದ ವಿರುದ್ದ ಟೀಕೆ ಮಾಡುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಛಾಟಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿ ಈ...

ಮಾದಕ ವಸ್ತು ಮಾರಾಟ: ಮಹಾರಾಷ್ಟ್ರ ವ್ಯಕ್ತಿ ಬಂಧನ

ಬೆಳಗಾವಿ: 22- ಇತ್ತೀಚೆಗೆ ಮಾದಕ ವಸ್ತು ಮತ್ತು ಅಕ್ರಮ ಮದ್ಯ ಮಾರಾಟ ಮಾಡುವವರ ಮೇಲೆ ದಾಳಿ ಮಾಡುತ್ತಿರುವ ಬೆಳಗಾವಿ ಸಿಸಿಬಿ ಪೊಲೀಸರು ಗಾಂಜಾ ಮಾರಾಟ ಮಾಡಲು ಮಹಾರಾಷ್ಟ್ರದಿಂದ ಆಗಮಿಸಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿ ಅವನಿಂದ...

National

ಮುಂಬೈ ಹೋಟೆಲ್ ನಲ್ಲಿ ಸಂಸದ ಮೋಹನ ದೇಲ್ಕರ ಆತ್ಮಹತ್ಯೆ?

ನವದೆಹಲಿ: ಫೆ 22 - ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ ದೇಲ್ಕರ ಮುಂಬೈನ ಹೋಟೆಲ್ ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೋಹನ್...

ಡಾ. ವರವರ ರಾವ್ ಗೆ ಕೊನೆಗೂ ಜಾಮೀನು

ಮಂಬೈ: ಫೆ 22 - ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಯಾಗಿರುವ 81 ವರ್ಷದ ತೆಲುಗು ಕವಿ ಡಾ. ವರವರ ರಾವ್ ಅವರಿಗೆ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು...

ಮಹದಾಯಿ ವಿವಾದ; ಮೇಲುಸ್ತುವಾರಿ ಸಮಿತಿ ರಚನೆಗೆ ಸುಪ್ರೀಮ ಕೋರ್ಟ ಸೂಚನೆ

ನವದೆಹಲಿ: ಫೆ 22- ಮಹದಾಯಿ ನದಿ ನೀರು ಹಂಚಿಕೆಯ ಮೇಲುಸ್ತುವಾರಿಗೆ ಸಮಿತಿ ರಚಿಸಲು ಸುಪ್ರೀಮ ಕೋರ್ಟ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರ ಮಲಪ್ರಭಾದ ನೀರಿನ ಹರಿವನ್ನು ತಿರುಗಿಸುತ್ತಿದೆ ಎಂದು ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ...

ಮುಂಬೈಯಲ್ಲಿ ಇವೇನಾ ಅಚ್ಛೆ ದಿನ್ ಬ್ಯಾನರ್

ಮುಂಬೈ, 22- ದೇಶದಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ ದರಕ್ಕೆ ತಲುಪಿರುವದರಿಂದ ಶಿವಸೇನೆಯ ಯುವ ವಿಭಾಗವಾದ ಯುವಸೇನೆಯು ಸೋಮವಾರ ಮುಂಬೈ ನಗರದ ಹಲವಾರು ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್, ಡಿಸೆಲ್ ದರ ಬರೆದು ಇದೇನಾ...

International

ಧ್ವಂಸಗೊಂಡ ಹಿಂದೂ ದೇವಾಲಯ ಕೂಡಲೇ ನಿರ್ಮಾಣಕ್ಕೆ ಪಾಕ್ ಕೋರ್ಟ ಆದೇಶ

ಇಸ್ಲಾಮಾಬಾದ: 9- ದುಷ್ಕರ್ಮಿಗಳಿಂದ ಧ್ವಂಸಗೊಂಡಿರುವ ಶತಮಾನಗಳ ಇತಿಹಾಸ ಹೊಂದಿದ್ದ ಹಿಂದೂ ದೇವಾಲಯವನ್ನು ಕೂಡಲೇ ಪುನರ್ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಪಾಕಿಸ್ತಾನ ಸುಪ್ರೀಮ ಕೋರ್ಟ ಆದೇಶಿಸಿದೆ. ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಸಮಯದ ಬಗ್ಗೆ...

ಕೋವಿಡ್ ರೋಗಿಗಳಿಗೆ ಕ್ಷಯರೋಗದ ಅಪಾಯವಿದೆ : ರಶಿಯಾ

ಮಾಸ್ಕೊ, ಫೆ 08- ಕೊರೋನಾ ವೈರಸ್ ಸೋಂಕಿಗೆ ಒಳಗಾದ ರೋಗಿಗಳಿಗೆ ಕ್ಷಯರೋಗ ಬರುವ ಸಾಧ್ಯತೆ ಹೆಚ್ಚು ಎಂದು ರಷ್ಯಾದ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. "ಕೋವಿಡ್ -19 ನಿಂದ ಬಳಲಿದ ನಂತರ ಅನೇಕ ರೋಗಿಗಳು ಶ್ವಾಸಕೋಶದಲ್ಲಿ...

ಬಂಗಾರದ ನಾಲಿಗೆಯ “ಮಮ್ಮಿ”

ಕೈರೋ, 3- ಸತ್ತ ನಂತರ ಮತ್ತೊಂದು ಜೀವನವಿದೆ ಎಂದು ನಂಬಿದ್ದ ಪುರಾತನ ಕಾಲದ ಈಜಿಪ್ತ ನಾಗರಿಕರು ಕೆಡಬಾರದೆಂದು ಶವಗಳಿಗೆ ದ್ರಾವಣ ಹಚ್ಚಿಡುತ್ತಿದ್ದರು. ಹಾಗೆಯೇ ಅವರ ಮತ್ತೊಂದು ಜೀವನಕ್ಕೆ ಬೇಕಾಗುತ್ತದೆಯೆಂದು ಸಾಕಷ್ಟು ಚಿನ್ನವನ್ನು ಶವ...

ಆಂಗ್ ಸಾನ್ ಸೂಕಿ ಬಂಧನ, ಮ್ಯಾನ್ಮಾರ್ ನಲ್ಲಿ ತುರ್ತು ಪರಿಸ್ಥಿತಿ

ಮಾಸ್ಕೋ ಫೆಬ್ರವರಿ 1 - ಮ್ಯಾನ್ಮಾರ್‌ನ ರಾಜಕೀಯ ನಾಯಕಿ ಆಂಗ್ ಸಾನ್ ಸೂಕಿ ಹಾಗೂ ಅಧ್ಯಕ್ಷ ವಿನ್ ಮೈಂಟ್ ಅವರನ್ನು ಬಂಧಿಸಲಾಗಿದೆ ಎಂದು ರಾಯಿಟರ್ಸ್ ವರದಿ ಸೋಮವಾರ ಮಾಡಿದೆ. ದೇಶದ ಆಡಳಿತ ಪಕ್ಷದ ಇತರ...

Entertainment

ಇಂದು ಧಾರವಾಡದಲ್ಲಿ ಬೆಳವಡಿ ಮಲ್ಲಮ್ಮ ನಾಟಕ

ಧಾರವಾಡ: 14- ಹುಬ್ಬಳ್ಳಿಯ ಜೀವಿ ಕಲಾ ಬಳಗದ ಅಧ್ಯಕ್ಷರಾದ ಗದಿಗೆಯ್ಯಾ ಹಿರೇಮಠ ಅವರು ರಚಿಸಿ ನಿರ್ದೇಶಿಸಿದ ಐತಿಹಾಸಿಕ " ಸಮರ ಸಿಂಹಿಣಿ ಬೆಳವಡಿ ಮಲ್ಲಮ್ಮ" ನಾಟಕವು ರವಿವಾರ ದಿ ೧೪- ೨ -೨೦೨೧ ರಂದು ಪ್ರದರ್ಶನಗೊಳ್ಳಲಿದೆ. ಬೆಳವಡಿಯ ನೇತಾಜಿ ತರುಣ...

ಮಾರುಕಟ್ಟೆ ಗಿಜಿಗುಡುವಾಗ ಚಿತ್ರಮಂದಿರವೇಕೆ ಖಾಲಿ?

ಬೆಂಗಳೂರು, ಫೆ 03- “ಬಸ್ ಫುಲ್, ಮಾರ್ಕೆಟ್ ಗಿಜಿ ಗಿಜಿ ಆದರೆ ಚಿತ್ರ ಮಂದಿರಗಳೇಕೆ ಭಣಗುಡಬೇಕು” ಎಂದು ನಟ ಧ್ರುವ ಸರ್ಜಾ ಮಾಡಿರುವ ಟ್ವೀಟ್ ಗೆ ಕನ್ನಡ ಚಿತ್ರರಂಗದ ಬಹುತೇಕ ನಟ, ನಿರ್ದೇಶಕರು...

ಜ. 24ರಂದು ವರುಣ ಧವನ್-ನತಾಶಾ ಮದುವೆ

ಮುಂಬೈ, ಜ 15 - ಖ್ಯಾತ ನಿರ್ಮಾಪಕ, ನಿರ್ದೇಶಕ ಡೇವಿಡ್ ಧವನ ಪುತ್ರ ನಟ ವರುಣ ಧವನ್ ಅವರು ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇದೇ...

‘ಲಂಕಾಸುರ’ ಚಿತ್ರಕ್ಕೆ ಚಾಲನೆ

ಬೆಂಗಳೂರು, ಜ 15 - ಸುಗ್ಗಿ ಹಬ್ಬ ಸಂಕ್ರಾಂತಿಯ ಸಂಭ್ರಮದಂದು ವಿನೋದ ಪ್ರಭಾಕರ ಹಾಗೂ ಲೂಸ್ ಮಾದ ಅಭಿನಯದ ‘ಲಂಕಾಸುರ’ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಎ.ಎಂ.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಾವತಿ ಮುನಿಸ್ವಾಮಿ ಅವರು ನಿರ್ಮಿಸುತ್ತಿರುವ...

Sports

ಭಾರತಕ್ಕೆ 317 ರನ್ ಜಯ

ಚೆನ್ನೈ, ಫೆ 16- ಭಾರತದ ಬಲಿಷ್ಠ ಸ್ಪಿನ್ ಕೋಟೆಯನ್ನು ಭೇದಿಸುವಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ವಿಫಲವಾಗಿದ್ದು, ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ ಪಡೆ 1-1 ರಿಂದ ಸಮಬಲ ಸಾಧಿಸಿದೆ. ನಿರೀಕ್ಷೆಯಂತೆ ಮಂಗಳವಾರ ಭಾರತ...

ಗೆಲುವಿನ ಹೊಸ್ತಿಲಲ್ಲಿ ಭಾರತ

ಚೆನ್ನೈ: ಫೆ 15 - ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಅವರ ಶತಕ ಹಾಗೂ ನಾಯಕ ವಿರಾಟ ಕೊಹ್ಲಿ ಅವರ ಅರ್ಧ ಶತಕದ ನೆರವಿನಿಂದ ಭಾರತ ನೀಡಿದ 482 ರನ್ ಗೆಲುವಿನ ಗುರಿ...

ಚೆನ್ನೈ ತಲುಪಿದ ಇಂಗ್ಲೆಂಡ್ ಕ್ರಿಕೆಟ್ ತಂಡ

ನವದೆಹಲಿ, ಜ.24 - ಫೆಬ್ರವರಿ 5 ರಿಂದ ಭಾರತ ವಿರುದ್ಧದ ಟೆಸ್ಟ್ ಸರಣಿಗಾಗಿ ವೇಗದ ಬೌಲರ್ ಜೋಫ್ರಾ ಆರ್ಚರ್, ಆಲ್‌ರೌಂಡರ್ ಬೆನ್ ಸ್ಟೋಕ್ಸ್, ಬ್ಯಾಟ್ಸ್‌ಮನ್ ರೋರಿ ಬರ್ನ್ಸ್ ಮತ್ತು ಜೊನಾಥನ್ ಟ್ರಾಟ್ ಸೇರಿದಂತೆ...

ರಹಾನೆ ಮತ್ತು ಇತರ ಆಟಗಾರರಿಗೆ ಕ್ವಾರಂಟೈನ್ ವಿನಾಯಿತಿ

ನವದೆಹಲಿ, ಜ.21- ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗಾವಸ್ಕರ್ ಟ್ರೋಫಿಯನ್ನು ಗೆದ್ದು ಗುರುವಾರ ಬೆಳಿಗ್ಗೆ ಮುಂಬೈಗೆ ಮರಳಿದ ನಾಯಕ ಅಜಿಂಕ್ಯ ರಹಾನೆ ಮತ್ತು ಇತರ ನಾಲ್ಕು ಭಾರತೀಯ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರ ಕ್ವಾರಂಟೈನ್ ನಿಂದ ವಿನಾಯಿತಿ...