ಬೆಂಗಳೂರು: ಫೆ 20- ರಾಜ್ಯದಲ್ಲಿ ಜುಲೈ 7 ಹಾಗೂ 8ರಂದು ಸಿಇಟಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಜುಲೈ 7 – ಜೀವವಿಜ್ಞಾನ, ಗಣಿತ ಜುಲೈ 8 – ಭೌತವಿಜ್ಞಾನ, ರಸಾಯನ ವಿಜ್ಞಾನ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಜುಲೈ 9ರಂದು ಕನ್ನಡ ಪತ್ರಿಕೆಯ ಪರೀಕ್ಷೆ ನಡೆಸಲಾಗುವುದು ರಾಷ್ಟ್ರ ಹಾಗೂ ರಾಜ್ಯದ ಇತರ ಪರೀಕ್ಷೆ ಗಳ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಮಾಡಲಾಗಿದೆ ಎಂದು ಟ್ವೀಟ್ ನಲ್ಲಿ ಪ್ರಕಟಿಸಿದ್ದಾರೆ.
2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಆಯ್ಕೆಗಾಗಿ ನಡೆಯುವಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದೆ. ಇಂತಹ ಪರೀಕ್ಷೆಗೆ ಎಲ್ಲಾ ಪರೀಕ್ಷೆಯನ್ನು ಗಮನದಲ್ಲಿ ಇಟ್ಟುಕೊಂಡು ವೇಳಾಪಟ್ಟಿಯನ್ನು ಪ್ರಕಟಿಸಲಾಗಿರುವುದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ, ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಹಾಗೂ ಇತರೆ ರಾಜ್ಯಗಳ ಸಿಇಟಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಜೂನ್ 14ರಿಂದ ಜೂನ್ 15ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮೇ 24ರಿಂದ ಜೂನ್ 10ರವರೆಗೆ ನಡೆಯಲಿದೆ. ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಮೇ.4ರಿಂದ ಜೂನ್ 2ರವರೆಗೆ ನಡೆಯಲಿದೆ. ಈ ಎಲ್ಲಾ ವೇಳಾಪಟ್ಟಿಗಳನ್ನು ಗಣನೆಗೆ ತೆಗೆದುಕೊಂಡು ರಾಜ್ಯದ ಸಿಇಟಿ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.