ಹುಬ್ಬಳ್ಳಿ: 1- ಪಕ್ಷದ ಮುಖಂಡರ ಹೆಸರು ಬಳಸಿಕೊಂಡು ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಡಿ.ಕೆ.ಶಿವಕುಮಾರ ಅವರ ಬಳಿ ಕಡಿಮೆ ಬಡ್ಡಿ ದರಕ್ಕೆ ಸಾಲ ಕೊಡಿಸುವುದಾಗಿ ಜನರಿಂದ ಹಣ ಪಡೆದು ಪೂರ್ಣಿಮಾ ವಂಚಿಸುತ್ತಿದ್ದರು. ತನಗೆ 10 ಸಾವಿರ ರೂಪಾಯಿ ಹಣ ನೀಡಿದರೆ ಸಾಲ ಕೊಡಿಸುತ್ತೇನೆ ಎಂದು 35ಕ್ಕೂ ಹೆಚ್ಚು ಜನರಿಗೆ ವಂಚಿಸಿದ್ದರು. ಅಲ್ಲದೇ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಅವರ ಹೆಸರನ್ನು ಕೂಡ ಬಳಸಿ ವಂಚಿಸುತ್ತಿದ್ದರು ಎನ್ನಲಾಗಿದೆ.
ಪ್ರಕರಣ ಬೆಳಕಿಗೆ ಬಂದ ಬಳಿಕ ಇದೀಗ ಪೂರ್ಣಿಮಾ ಅವರನ್ನು ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿ ಹುಬ್ಬಳ್ಳಿ-ಧಾರವಾಡ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಮ್ರಾನ್ ಎಲಿಗಾರ ಆದೇಶ ಹೊರಡಿಸಿದ್ದಾರೆ.