ಜಲಗಾವ: (ಮಹಾರಾಷ್ಟ್ರ), 3-ಮಹಾರಾಷ್ಟ್ರದ ಜಲಗಾಂವ ಹಾಸ್ಟೆಲ್ನ ಯುವತಿಯರನ್ನು ಬೆತ್ತಲಾಗಿ ನೃತ್ಯ ಮಾಡುವಂತೆ ಪೊಲೀಸರು ಒತ್ತಾಯಿಸಿರುವ ಘಟನೆಯ ಬಗ್ಗೆ ತನಿಖೆ ನಡೆಸಲು ಮಹಾರಾಷ್ಟ್ರ ಗೃಹಮಂತ್ರಿ ಅನಿಲ ದೇಶಮುಖ ಆದೇಶಿಸಿದ್ದಾರೆ. ಇದರ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರ ನಾಲ್ಕು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.
ಈ ವಿಷಯವನ್ನು ವಿರೋಧ ಪಕ್ಷದ ಸದಸ್ಯರು ಕೈಗೆತ್ತಿಕೊಂಡ ನಂತರ ಸಚಿವರು ರಾಜ್ಯ ವಿಧಾನಸಭೆಯಲ್ಲಿ ಈ ಘೋಷಣೆ ಮಾಡಿದ್ದಾರೆ.
ಬಿಜೆಪಿ ಮುಖಂಡ ಸುಧೀರ ಮುಂಗಂತಿವಾರ ಮಹಾರಾಷ್ಟ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು.
ಜಲಗಾಂವ ಹಾಸ್ಟೆಲ್ನ ಯುವತಿಯರು ದೂರಿದಂತೆ, “ಕೆಲವು ಪೊಲೀಸರು ಮತ್ತು ಹೊರಗಿನವರು ತನಿಖೆಯ ನೆಪದಲ್ಲಿ ಹಾಸ್ಟೆಲ್ ಒಳಗೆ ಬಂದು ಬೆತ್ತಲಾಗಿ ನೃತ್ಯ ಮಾಡಲು ಒತ್ತಾಯಿಸಿದ್ದಾರೆ” ಎಂದು ಹಲವು ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಇದು ಅತ್ಯಂತ ದುರದೃಷ್ಟಕರ ಘಟನೆ. ಇದರ ಬಗ್ಗೆ ತನಿಖೆ ನಡೆಸಲು ನಾಲ್ಕು ಸದಸ್ಯರ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಕೋರಲಾಗಿದೆ. ವರದಿಯ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು” ಅನಿಲ ದೇಶಮುಖ ಹೇಳಿದರು.