INDIA COVID-19 Statistics

13,714,419
Confirmed Cases
Updated on 13/04/2021 3:06 PM
1,280,101
Total active cases
Updated on 13/04/2021 3:06 PM
171,205
Total deaths
Updated on 13/04/2021 3:06 PM
Tuesday, April 13, 2021

INDIA COVID-19 Statistics

13,714,419
Total confirmed cases
Updated on 13/04/2021 3:06 PM
1,280,101
Total active cases
Updated on 13/04/2021 3:06 PM
171,205
Total deaths
Updated on 13/04/2021 3:06 PM
12,263,113
Total recovered
Updated on 13/04/2021 3:06 PM
Home State Bengaluru ಮುಖ್ಯಮಂತ್ರಿಗೆ ಅವರ ಸರ್ಕಾರದಲ್ಲಿದ್ದವರೇ ತೊಂದರೆ ಕೊಡುತ್ತಿರುವಾಗ ನಾನೇಕೆ ತೊಂದರೆ ಕೊಡಲಿ

ಮುಖ್ಯಮಂತ್ರಿಗೆ ಅವರ ಸರ್ಕಾರದಲ್ಲಿದ್ದವರೇ ತೊಂದರೆ ಕೊಡುತ್ತಿರುವಾಗ ನಾನೇಕೆ ತೊಂದರೆ ಕೊಡಲಿ

ಬೆಂಗಳೂರು: ಮಾ.15- ಮೈತ್ರಿ ಸರ್ಕಾರ ಉರುಳಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಅವರ ಸರ್ಕಾರದಲ್ಲಿದ್ದವರೇ ತೊಂದರೆ ಕೊಡುತ್ತಿರುವಾಗ ನಮ್ಮ ಸರ್ಕಾರವನ್ನು ಅವರೇ ಪತನಗೊಳಿಸಿದರೆಂದು ನಾನೇಕೆ ತೊಂದರೆ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಯಾವ ರೀತಿ ಶ್ರಮಪಟ್ಟು ಮುಖ್ಯಮಂತ್ರಿಯಾದರು ಎನ್ನುವುದನ್ನು ಮಾಧ್ಯಮಗಳೇ ಒಂದು ವಾರದಿಂದ ಪ್ರಸಾರ ಮಾಡುತ್ತಿವೆ. ಅದು ಎಲ್ಲಿಗೆ ಬಂದು ತಲುಪಿದೆ?ಮುಖ್ಯಮಂತ್ರಿಗಳು ಈಗ ಏನು ಮಾಡುತ್ತಾರೆ? ನಮ್ಮ ಸಿಡಿ ಪ್ರಸಾರ ಮಾಡಬೇಡಿ ಎಂದು ನ್ಯಾಯಾಲಯದಿಂದ ತಡೆ ತಂದ ಮಂತ್ರಿಗಳನ್ನು ಯಾರೂ ಕಾಪಾಡುತ್ತಾರೆಯೋ? ಅಥವಾ ಏನು ಮಾಡುತ್ತಾರೆಯೋ? ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಅವರ ಪಕ್ಷದವರಿಂದ ತೊಂದರೆಗೀಡಾಗುತ್ತಿರುವುದರಿಂದ ನಾವು ಮತ್ತೇಕೆ ತೊಂದರೆ ಕೊಡುವುದು. ಕೊನೆಕ್ಷಣದಲ್ಲಿ ಒಳ್ಳೆಯ ಹೆಸರು ಮಾಡಿಕೊಂಡು ಹೋಗಲಿ ಎಂದು ಸುಮ್ಮನಾಗಿದ್ದೆ ಎಂದು ಸೂಚ್ಯವಾಗಿ ಹೇಳಿದರು.

ರಮೇಶ ಜಾರಕಿಹೊಳಿ ಸಿಡಿ ಪ್ರಕರಣವೂ ಮೇಟಿ ಪ್ರಕರಣದಂತೆ ಆಗುತ್ತದೆ. ಮೇಟಿ ಪ್ರಕರಣದಲ್ಲಿ ಒಂದು ವಾರ ಭಾರೀ ಚರ್ಚೆಯಾಗಿ ಬಳಿಕ ಬಿ ರಿಪೋರ್ಟ್ ಹಾಕಿದ್ದರು. ಈಗಲೂ ಸಹ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ಅದೇ ಆಗುತ್ತದೆ ಎಂದರು.

ಕೊರೋನಾ ಎರಡನೆ ಅಲೆ ಹೆಚ್ಚುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯವನ್ನು ಲಾಕ್ಡೌನ್ ಮಾಡುವುದೇ ಸೂಕ್ತ ಎಂದು ಸರ್ಕಾರಕ್ಕೆ ಸಲಹೆ ನೀಡಿದರು. ಜನ ಮಾಸ್ಕ್ ಹಾಕಿರುವುದಿಲ್ಲ, ಕೆಲವೊಮ್ಮೆ ನಾವೂ ಹಾಕಿರುವುದಿಲ್ಲ.ಕಾರ್ಯಕ್ರಮಕ್ಕೆ ಹೋದರೆ 50 ಜನ ಸೆಲ್ಫಿ ತೆಗೆದುಕೊಳ್ಳುತ್ತಾರೆ.ದೇವರ ದಯೆಯಿಂದ ಈಗ ನಾವೂ ಬದುಕಿರುವುದಾಗಿ ಹೇಳಿದರು.

ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗಿದೆ. ಇಂಧನ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಧರಣಿ ನಡೆಸುತ್ತಿದ್ದೆ. ಜನರು ವಾಹನ ಚಲಾಯಿಸುವುದನ್ನು ನಿಲ್ಲಿಸಿದ್ದಾರೆ. ಕೇಂದ್ರ ಕಟ್ಟಿಗೆ ಉರಿಸುವುದು ಬೇಡವೆಂದು ಉಜ್ವಲ ಯೋಜನೆ ತಂದರು. ರಾಜ್ಯದ ಜನತೆ ಬಿಜೆಪಿ ಸರ್ಕಾರದ ನಡವಳಿಕೆ ಬಗ್ಗೆ ಈಗಲಾದರೂ ಅರ್ಥ ಮಾಡಿಕೊಳ್ಳಲಿ. ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ನನ್ನ ನೇತೃತ್ವದ ಸರ್ಕಾರ ಕೆಟ್ಟ ಸರ್ಕಾರ ಎಂದು ಬಿಜೆಪಿ ಸರ್ಕಾರವನ್ನು ಪತನಗೊಳಿಸಿದಾಗ ನೆರೆ ಸಂತ್ರಸ್ಥರಿಗೆ ಕೊಡಗಿನಲ್ಲಿ 9 ಲಕ್ಷ ರೂ.ನಂತೆ ಸಾವಿರ ಮನೆಗಳನ್ನು ನಿರ್ಮಿಸಿಕೊಟ್ಟಿದ್ದೇನೆ. 25 ಸಾವಿರ ಕೋಟಿ ರೂ. ರೈತ ಸಾಲ ಮನ್ನ ಮಾಡಿದೆ. ಆದರೆ ಯಾರೂ ನನ್ನನ್ನೂ ಸ್ಮರಿಸಲಿಲ್ಲ.ನನ್ನ ಹೆಸರನ್ನೂ ನೆನಪು ಮಾಡಿಕೊಳ್ಳಲಿಲ್ಲ.ಮುಂದಿನ ವರ್ಷ ಮಳೆ ಬಂದಾಗ ಅದೇ ಪರಿಸ್ಥಿತಿ ಬರಲಿದೆ.ಹೀಗಾಗಿ ವೈಜ್ಞಾನಿಕ ಅಧ್ಯಯನ ಮಾಡಿ ಮನೆ ಕಟ್ಟಿಕೊಡಬಹುದಿತ್ತು.ಆಗ ನಾನು ಕೊಟ್ಟ ಹಣ ಡೈವರ್ಟ್ ಮಾಡಿದ್ದು, ಈಗ ಹಂಚಿಕೆ ಮಾಡಿರುವುದಾಗಿ ಸೋಮಶೇಖರ ಹೇಳಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದೆವು.ಬಳಿಕ ಸೆಸ್ ಕಡಿಮೆ ಮಾಡಲಾಯಿತು. ಜಾಸ್ತಿ ಮಾಡಿದ್ದು ಹೇಳಿದ್ದರೇ ಹೊರತು, ಕಡಿಮೆ ಮಾಡಿದ್ದನ್ನೂ ಯಾರೂ ಹೇಳಲಿಲ್ಲ.ಇಸ್ರೇಲ್ ಮಾದರಿಯ ಕೃಷಿ ಯೋಜನೆಗೆ ಹಣ ಇಟ್ಟಿದ್ದೆ.ಅದನ್ನೂ ಬೇರೆಯದಕ್ಕೆ ಬಳಸಿಕೊಂಡರು., ಆ ಯೋಜನೆ ಈವರೆಗೂ ಆರಂಭ ಆಗಲೇ ಇಲ್ಲ ಎಂದು ಸರ್ಕಾರವನ್ನು ಕುಮಾರಸ್ವಾಮಿ ಕುಟುಕಿದರು.

ಉಪಚುನಾವಣೆ ವಿಚಾರವಾಗಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾನು ಅಬ್ಬರಕ್ಕೆ ಹೋಗಿಲ್ಲ.ಸೋಲು,ಗೆಲುವು ನೋಡಿದ್ದೇವೆ ಈ ಉಪಚುನಾವಣೆಯಲ್ಲಿ ಬೆಳಗಾವಿ ಸಂಸತ್ತಿಗೆ ಸಂಬಂಧಿಸಿದ್ದಾದರೂ ನಾವು ಸುಮ್ಮನೆ ಕೂರುವುದಿಲ್ಲ.ಮೂರು ಕ್ಷೇತ್ರಗಳಿಗೂ ಜೆಡಿಎಸ್ ನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ನವರಿಗೆ ಅದೇನು ದರಿದ್ರ ಬಡಿದಿದೆಯೋ ಗೊತ್ತಿಲ್ಲ.ಈಗಲೂ ಯಾರಿದ್ದೀರಿ ಬನ್ನಿ ಎಂದು ಮನೆ ಬಾಗಿಲು ತಟ್ಟುತ್ತಿದ್ದಾರೆ.ನಮ್ಮಲಿದ್ದ ದರಿದ್ರಗಳು ಹೋಗಿವೆ ಎಂದು ಸಿದ್ದರಾಮಯ್ಯ ಈಗಲೂ ಹೇಳುತ್ತಾರೆ. ಜೆಡಿಎಸ್ ನಲ್ಲಿ ಮಹಾನ್ ನಾಯಕರೇನೂ ಇಲ್ಲ.ಇರುವುದೆಲ್ಲ ಸಾಮಾನ್ಯ ನಾಯಕರಷ್ಟೇ ಎಂದು ಮಾರ್ಮಿಕವಾಗಿ ನುಡಿದ ಕುಮಾರಸ್ವಾಮಿ, ಈಗಲೂ ನಮ್ಮ‌ಪಕ್ಷದ ಬಗ್ಗೆ ಕೆಲವರು ಮಾತನಾಡುತ್ತಾರೆ.ನನ್ನ ಬಳಿ ಶಕುನಿಯೂ ಇಲ್ಲ, ಮಂದೆಯೂ ಇಲ್ಲ.ನಾನು ಎಲ್ಲವನ್ನೂ ನೋಡಿ ಬಿಟ್ಟಿದ್ದೇನೆ ಎಂದರು.

ಜೆಡಿಎಸ್ ನಾಯಕ ಹೆಚ್.ಡಿ ರೇವಣ್ಣ ಮಾತನಾಡಿ, 2019-20 ,20-21 ನೇ ಸಾಲಿನಲ್ಲಿ ಮೈತ್ರಿ ಸರ್ಕಾರದಲ್ಲಿ ಕೊಟ್ಟ ಕಾಮಗಾರಿಗಳನ್ನು ಸರ್ಕಾರ ನಿಲ್ಲಿಸಿದೆ.ಕೆಲವು ಇಲಾಖೆಯಲ್ಲಿ ಎಸ್ ಸಿ ಎಫ್ ಗ್ರಾಂಟ್ ಇರಬಹುದು.ಕಾವೇರಿ ಬೇಸಿನ್ ನಲ್ಲಿ ರೈತರು ಜಮೀನು ಕಳೆದುಕೊಂಡಿದ್ದಾರೆಕರ್ನಾಟಕ ನೀರಾವರಿ ನಿಗಮದಲ್ಲಿ 578 ಕೋಟಿ ರೂ. ಇದೆಯಾದರೂ ಇನ್ನೂ ರೈತರಿಗೆ,ಗುತ್ತಿಗೆದಾರರಿಗೆ ಹಣ ನೀಡಿಲ್ಲ.ಮೈತ್ರಿ ಸರ್ಕಾರದಲ್ಲಿ ಕೊಟ್ಟ ಕಾರ್ಯಕ್ರಮ ಗಳಿಗೆ ಮೀಸಲಿಟ್ಟ ಹಣ ಕೊಡಿ ಎಂದು ಸರ್ಕಾರವನ್ನು ಒತ್ತಾಯಿಸುತ್ತಲೇ ಇದ್ದೇವೆ. ಈ ಬಗ್ಗೆ ವಿಧಾನಸಭೆಯಲ್ಲಿ ನಾಳೆ ನಾಳೆ ನಿಯಮ‌ 69ರ ಅಡಿಯಲ್ಲಿ ಚರ್ಚೆ ಮಾಡುತ್ತೇವೆ.ಸಿಎಂ ಸರಿಯಾದ ರೀತಿಯಲ್ಲಿ ಸ್ಪಂದಿಸದೇ ಇದ್ದರೆ ಧರಣಿ ಮಾಡಲು ಸಹ ಸಿದ್ಧ ಎಂದು ಸರ್ಕಾರವನ್ನು ಎಚ್ಚರಿಸಿದರು.

ಜಾರಕಿಹೊಳಿ ಸಿಡಿ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿದ ಎಚ್.ಡಿ.ರೇವಣ್ಣ, ವೈಯಕ್ತಿಕ ಸಂಬಂಧಗಳೇ ಬೇರೆ. ರಾಜಕಾರಣವೇ ಬೇರೆ. ಹೀಗಾಗಿ ವೈಯಕ್ತಿಕವಾಗಿ ರಮೇಶ ಜಾರಕಿಹೊಳಿಗೆ ಕರೆ ಮಾಡಿದ್ದೆ. ನಾನು ಜಾರಕಿಹೊಳಿ ಬಗ್ಗೆ ಎಂದೂ ಕೆಟ್ಟದಾಗಿ ಮಾತನಾಡಿಲ್ಲ. ಮೈತ್ರಿ ಸರ್ಕಾರ ಬಿದ್ದಾಗಲೂ ಮಾತನಾಡಿಲ್ಲ. ಸಣ್ಣ ಸಮುದಾಯದಿಂದ ಮೇಲೆದ್ದು ರಮೇಶ ಜಾರಕಿಹೊಳಿ ರಾಜಕಾರಣದಲ್ಲಿ ಬಂದಿದ್ದಾರೆ. ಇಂತಹ ಆಪಾದನೆಗಳೆಲ್ಲ ಬಂದಾಗ ಸಮಾಜದಲ್ಲಿ ಎಲ್ಲವನ್ನೂ ಎದುರಿಸಿ ನಿಲ್ಲಬೇಕು ಎಂದು ರಮೇಶ ಜಾರಕಿಹೊಳಿ ಪರ ಎಚ್.ಡಿ.ರೇವಣ್ಣ ನಿಂತರು.

LEAVE A REPLY

Please enter your comment!
Please enter your name here

State

ರಮಜಾನ‌ ; ಸರ್ಕಾರದಿಂದ ಹೊಸ ಮಾರ್ಗಸೂಚಿ

ಬೆಂಗಳೂರು, ಏ 13- ಮುಸ್ಲಿಮರ ಪವಿತ್ರ ರಮಜಾನ ಉಪವಾಸ ಮಾಸ ಇಂದಿನಿಂದ ಆರಂಭವಾಗಲಿದ್ದು ಒಂದು ತಿಂಗಳ ಕಾಲ ಈ ಆಚರಣೆ ಇರಲಿದೆ. ಇದಕ್ಕಾಗಿ ಕೊರೊನಾ ಕಾರಣದಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕಂಟೈನ್...

ಕೋವಿಡ್ ಕುರಿತು ಸರ್ವಪಕ್ಷ ಸಭೆ- ಮುಖ್ಯಮಂತ್ರಿ

ಬೀದರ, ಏಪ್ರಿಲ್ 13 - ಕೋವಿಡ್ ಪರಿಸ್ಥಿತಿ ಮತ್ತು ಲಾಕ್‌ಡೌನ್ ಹೇರುವ ಕುರಿತು ಚರ್ಚಿಸಲು ಈ ತಿಂಗಳ 18 ರಂದು ಸರ್ವಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ...

ಗೋಕಾಕ ತಾಲೂಕಿನಲ್ಲಿ ಬಾಲಚಂದ್ರ ಜಾರಕಿಹೊಳಿ ಪ್ರಚಾರ

ಬೆಳಗಾವಿ, 11- ಕಳೆದ ಕೆಲ ದಿನಗಳಿಂದ ಕೆಲಸದ ಒತ್ತಡದ ನಿಮಿತ ಚುನಾವಣೆ ಪ್ರಚಾರ ಮಾಡಲು ಆಗಿರಲಿಲ್ಲ, ನಾಳೆಯಿಂದಲೇ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಪ್ರಚಾರ ಆರಂಭಿಸುವದಾಗಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ...

ಅಂಗಡಿ ಸಂಸದರಾಗಿ ಅನುದಾನ ತಂದದೆಷ್ಟು, ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಕೊಪ್ಪಳ, 11-ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅನನುಭವಸ್ಥರು, ಸಂಸತ್ ನಲ್ಲಿ ಅವರು ಹೇಗೆ ವಿಷಯ ಪ್ರಸ್ತಾಪಿಸುತ್ತಾರರೆಂದಿದ್ದ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ, ದಿ. ಸುರೇಶ ಅಂಗಡಿ ನಾಲ್ಕು ಅವಧಿಗೆ ಸಂಸದರಾಗಿ ಎಷ್ಟು ಅನುಧಾನ ರಾಜ್ಯಕ್ಕೆ...

National

ಗುಜರಾತ‌ ಹಿಂಸಾಚಾರ; ಮೋದಿಗೆ ಕ್ಲೀನ‌ಚಿಟ್‌ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ, ಏ 13- ಗುಜರಾತ್ ಗಲಭೆ ಪ್ರಕರಣದಲ್ಲಿ 2002ರಲ್ಲಿ ಅಂದಿನ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ, ಹಾಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೀಡಿದ್ದ ಕ್ಲೀನ್‌ ಚಿಟ್‌ ಪ್ರಶ್ನಿಸಿ...

24 ಗಂಟೆಯಲ್ಲಿ 1.61 ಲಕ್ಷ ಜನರಿಗೆ ಕೊರೋನಾ; 879 ಸಾವು

ನವದೆಹಲಿ, ಏ 13 - ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು. ಕಳೆದ 24 ಗಂಟೆಯಲ್ಲಿ 1,61,ಲಕ್ಷ ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಈಗ ಸೋಂಕಿತರ ಸಂಖ್ಯೆ...

ಸತ್ಯಮಂಗಲಂ ಅರಣ್ಯದಲ್ಲಿ ಭಾರಿ ನಿಧಿ; ವೀರಪ್ಪನ್ ಪುತ್ರಿಯ ಹೇಳಿಕೆ

ಚೆನ್ನೈ, ಏ 11- ದಂತ ಚೋರ, ಕಾಡು ಕಳ್ಳ ವೀರಪ್ಪನ್ ನೆಲೆಸಿದ್ದ ಸತ್ಯಮಂಗಲಂ ಅರಣ್ಯ ಪ್ರದೇಶದಲ್ಲಿ ಬೃಹತ್ ಪ್ರಮಾಣದ ಹಣ ಅಡಗಿಸಿಟ್ಟಿದ್ದಾನೆ ಎಂದು ಆತನ ಪುತ್ರಿ ವಿಜಯಲಕ್ಷ್ಮಿ ಹೇಳಿರುವುದು ಸಂಚಲನ ಸೃಷ್ಟಿಸಿದೆ. ವಾಲ್ಮುರಿಮಾಯಿ ಕಚ್ಚಿಯಲ್ಲಿ...

ನಟ ಸತೀಶ ಕೌಲ್ ಕೊರೋನಾಗೆ ಬಲಿ

ಚಂಡಿಗಡ, ಏಪ್ರಿಲ್ 10- ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ನಟ ಸತೀಶ ಕೌಲ್ ಶನಿವಾರ ಲುಧಿಯಾನದಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಸೋಂಕು ಪತ್ತೆಯ ನಂತರ ಸತೀಶ ಕೌಲ್ ರನ್ನು ಲುಧಿಯಾನಾದ ಖಾಸಗಿ...

International

30 ವರ್ಷದಿಂದ ಬೆಳೆಸಿದ್ದ ಉಗುರಿಗೆ ಕತ್ತರಿ

ಟೆಕ್ಸಾಸ್, 9- ದಾಖಲೆಗಾಗಿಯೋ ಶೋಕಿಗಾಗಿಯೋ 30 ವರುಷಗಳಿಂದ ಬೆಳೆಸಿಕೊಂಡು ಬಂದಿದ್ದ ತಮ್ಮ ಕೈ ಉಗುರುಗಳನ್ನು ಅಮೆರಿಕಾದ ಅಯನ್ನಾ ವಿಲಿಯಮ್ಸ ಎಂಬವರು‌ ಕತ್ತರಿಸಿಕೊಂಡು ಜಗತ್ತಿನ ಗಮನ ಸೆಳೆದಿದ್ದಾರೆ. ಅಯನ್ನಾ ಅವರು ಕಳೆದ ಮೂವತ್ತು ವರ್ಷಗಳಿಂದ ತಮ್ಮ...

ಕೋವಿಡ್ ಲಸಿಕೆ ನಂತರವೂ 63 ಜನರ ಸಾವು

ವಿಯೆನ್ನಾ ಏಪ್ರಿಲ್ 8 - ಆಸ್ಟ್ರಿಯಾದಲ್ಲಿ ಕರೋನ ಸೋಂಕಿನ ಲಸಿಕೆ ಪಡೆದ ನಂತರವೂ 63 ಜನರು ಮೃತಪಟ್ಟಿದ್ದಾರೆ ಎಂದು ಆಸ್ಟ್ರಿಯನ್ ಸರ್ಕಾರಿ ವಕ್ತಾರರು ಹೇಳಿದ್ದಾರೆ. ಕಳೆದ ವಾರ ಕರೋನ ಸೋಂಕಿನ ವಿರುದ್ಧ ಲಸಿಕೆ ಹಾಕಿದ...

ವಾರದಲ್ಲಿ ಕೋವಿಡ್ ಶೇ 5ರಷ್ಟು, ಸಾವಿನ ಸಂಖ್ಯೆ ಶೇ 11ರಷ್ಟು ಏರಿಕೆ

ಮಾಸ್ಕೋ, ಏಪ್ರಿಲ್ 7- ಕಳೆದೊಂದು ವಾರದಲ್ಲಿ ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ ಶೇ 5ರಷ್ಟು, ಸಾವಿನ ಸಂಖ್ಯೆ ಶೇ 11ರಷ್ಟು ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಓ) ವಾರದ ವರದಿ ತಿಳಿಸಿದೆ. ‘ಜಾಗತಿಕವಾಗಿ...

ನಾವಿನ್ನೂ ಸಾವು ಬದುಕಿನ ಹೋರಾಟದಲ್ಲಿದ್ದೇವೆ

ವಾಷಿಂಗ್ಟನ್, ಏ 7- ಕೊರೊನಾ ಸಾಂಕ್ರಾಮಿಕ ವಿಷಯದಲ್ಲಿ ಅಮೆರಿಕಾ ಈಗಲೂ ಸಾವು ಬದುಕಿನ ನಡುವಿನ ಸ್ಪರ್ಧೆಯಲ್ಲಿದೆ ಎಂದು ಅಮೇರಿಕದ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಹಾಗಾಗಿ ಕೊರೊನಾ ಸಾಂಕ್ರಾಮಿಕ ಪ್ರಸರಣ ತಡೆಗಟ್ಟಲು ಜನರು ಕಟ್ಟುನಿಟ್ಟಿನ...

Entertainment

ರಜನಿಕಾಂತಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ

ನವದೆಹಲಿ, ಎ 1- ಹೆಸರಾಂತ ಚಿತ್ರನಟ ರಜನಿಕಾಂತ ಅವರಿಗೆ ದಾದಾ ಸಾಹೇಬ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ ಜಾವಡೇಕರ ಈ ಬಗ್ಗೆ ಟ್ವೀಟ್ ಮಾಡಿ...

“90 ಹೊಡಿ ಮನೀಗ್ ನಡಿ” ಚಿತ್ರೀಕರಣ ಮುಕ್ತಾಯ

ಬೆಂಗಳೂರು, ಮಾರ್ಚ 31- ಹಾಸ್ಯ ನಟ ವೈಜನಾಥ ಬಿರಾದಾರ್ ಅಭಿನಯದ ಹಾಸ್ಯ ಪ್ರಧಾನ "90 ಹೊಡಿ ಮನೀಗ್ ನಡಿ" ಚಿತ್ರ ಇತ್ತೀಚೆಗೆ ಚಿತ್ರೀಕರಣ ಮುಕ್ತಾಯಗೊಳಿಸಿ ಕುಂಬಳಕಾಯಿ ಒಡೆಯುವ ಶಾಸ್ತ್ರ ಮುಗಿಸಿಕೊಂಡಿದೆ. "ಅಮ್ಮ ಟಾಕೀಸ ಬಾಗಲಕೋಟ"...

“ದಂಡಿ” ಚಿತ್ರಕ್ಕೆ ಚಾಲನೆ

ಕಾರವಾರ: ಮಾರ್ಚ 23 -ಸ್ವತಂತ್ರ ಪೂರ್ವದಲ್ಲಿ ನಡೆದ‌ ದಂಡಿ-ಉಪ್ಪಿನ ಸತ್ಯಾಗ್ರಹದ ಬಗ್ಗೆ ಸಿನಿಮಾವೊಂದು ಮೂಡಿ‌ಬರುತ್ತಿದೆ. ತಾರಾ, ಸುಚೇಂದ್ರ ಪ್ರಸಾದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ವಿಶಾಲ ರಾಜ್ ನಿರ್ದೇಶನವಿದ್ದು, ಹೊನ್ನಾವರದಲ್ಲಿ ಚಾಲನೆ...

“ತಾಜಮಹಲ್-2” ಚಿತ್ರೀಕರಣ ಮುಕ್ತಾಯ

ಬೆಂಗಳೂರು: ಮಾರ್ಚ 23- ಈ ಹಿಂದೆ ಡೇಂಜರ್‌ಜೋನ್, ನಿಶ್ಯಬ್ದ 2, ಅನುಷ್ಕದಂಥ ಚಿತ್ರಗಳನ್ನು ನಿರ್ದೇಶಿಸಿದ್ದ ದೇವರಾಜಕುಮಾರ ಅವರ ಸಾರಥ್ಯದ "ತಾಜ್‌ಮಹಲ್-2" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಎಚ್‌ಎಂಟಿ ಏರಿಯಾದಲ್ಲಿ ಸೆಟ್ ಹಾಕಿ ಜೀವ ಬಿಡುವೆ...

Sports

ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಕೃನಾಲ್, ಕನ್ನಡಿಗ ಪ್ರಸಿದ್ಧ

ಪುಣೆ, ಮಾ.23 - ಆಲ್‌ರೌಂಡರ್ ಕೃನಾಲ್ ಪಾಂಡ್ಯ ಮತ್ತು ಕನ್ನಡಿಗ ಪ್ರಸಿದ್ಧ ಕೃಷ್ಣ ಅವರು ಮಂಗಳವಾರ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಪರ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದರು. ಭಾರತಕ್ಕಾಗಿ 18...

ಸ್ಪಿನ್ ದಾಳಿಗೆ ಇಂಗ್ಲೆಂಡ ಪತನ; ಐಸಿಸಿ ಫೈನಲ್ ಗೆ ಭಾರತ

ಅಹಮದಾಬಾದ್, ಮಾ.6 - ಅನುಭವಿ ಸ್ಪಿನ್ ಬೌಲರ್ ಆರ್.ಅಶ್ವಿನ್ ಹಾಗೂ ಅಕ್ಷರ ಪಟೇಲ್ ಅವರ ಕರಾರುವಾಕ್ ದಾಳಿಗೆ ನಲುಗಿದ ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 25 ರನ್ ಗಳಿಂದ ಸೋಲು...

ರಿಷಭ ಪಂತ್ ಶತಕ; ಭಾರತದ ಮುನ್ನಡೆ

ಅಹಮದಾಬಾದ್, ಮಾ.5- ರಿಷಭ ಪಂತ್ (101) ಬಾರಿಸಿದ ಶತಕ ಹಾಗೂ ಆಲ್ ರೌಂಡರ್ ವಾಶಿಂಗ್ಟನ್ ಸುಂದರ್ (ಅಜೇಯ 60) ಅವರ ಅರ್ಧಶತಕದ ಬಲದಿಂದ ಭಾರತ ಕ್ರಿಕೆಟ್ ತಂಡ ಇಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್...

ಭಾರತದ ಸ್ಪಿನ್ ಬಲೆಗೆ ಬಿದ್ದ ಇಂಗ್ಲೆಂಡ್

ಅಹಮದಾಬಾದ್, ಮಾ.4 - ಸ್ಪಿನ್ ಬೌಲರ್ ಗಳಾದ ಅಕ್ಷರ ಪಟೇಲ (68ಕ್ಕೆ 4) ಹಾಗೂ ಆರ್.ಅಶ್ವಿನ್ (47ಕ್ಕೆ 3) ಅವರ ಬಿಗುವಿನ ದಾಳಿಗೆ ಪ್ರವಾಸಿ ಇಂಗ್ಲೆಂಡ್ ತಂಡ ನಲುಗಿದ್ದು, ಭಾರತ ನಾಲ್ಕನೇ ಟೆಸ್ಟ್...