ಬೆಳಗಾವಿ: ಮಾ 16 – ಕೊಲ್ಹಾಪುರದಲ್ಲಿ ನಡೆದಿದ್ದ ಗಲಾಟೆ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಸ್ಥಗಿಗೊಂಡಿದ್ದ ಕರ್ನಾಟಕ- ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಪುನರಾರಂಭವಾಗಿದೆ .
ಮಹಾರಾಷ್ಟ್ರ ಗಡಿ ನಿಪ್ಪಾಣಿವರೆಗೆ ಮಾತ್ರ ಕರ್ನಾಟಕದ ಬಸ್ಗಳು ಸಂಚರಿಸುತ್ತಿದ್ದವು. ಇದರಿಂದ ಬೆಳಗಾವಿ ಡಿಪೋಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇದೀಗ ಬಸ್ ಸಂಚಾರಕ್ಕೆ ಕೊಲ್ಹಾಪುರ ಅಧಿಕಾರಿಗಳು ಹಸಿರು ನಿಶಾನೆ ತೋರಿದ ಹಿನ್ನೆಲೆಯಲ್ಲಿ ಬಸ್ ಕಾರ್ಯಾಚರಣೆ ಮತ್ತೆ ಆರಂಭವಾಗಿದೆ.
ಶಿವಸೇನೆ ಕಾರ್ಯಕರ್ತರು ಕೊಲ್ಹಾಪುರದಲ್ಲಿ ಕನ್ನಡ ನಾಮಫಕಗಳಿಗೆ ಮಸಿ ಬಳಿದು ಪುಂಡಾಟ ಮೆರೆದಿದ್ದರು. ಕನ್ನಡ ನಾಮಫಲಕ ಹಾಕಿದರೆ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಅಂಗಡಿ ಮಾಲೀಕರಿಗೆ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಶಿವಸೇನೆ ಕಚೇರಿ ಮೇಲೆ ದಾಳಿ ನಡೆಸಿ, ಬೆಳಗಾವಿಯಲ್ಲಿ ಮರಾಠಿ ನಾಮಫಲಕಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತವಾಗಿತ್ತು .